ಇಂದೇ ವಿಚಾರಣೆಗೆ ಹಾಜರಾಗಬೇಕೆಂಬ ಸ್ಪೀಕರ್ ನೋಟಿಸ್ ಗೆ ಅತೃಪ್ತರ ಉತ್ತರವೇನು ಗೊತ್ತೇ?

ನ್ಯೂಸ್ ಕನ್ನಡ ವರದಿ: ನಿಮಗೆ ಪತ್ರದಲ್ಲಿ ನಾವು ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ. ರಾಜೀನಾಮೆಯನ್ನು ಶೀಘ್ರವೇ ಅಂಗೀಕರಿಸಬೇಕೆಂದು ನಾವು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದೇವೆ. ಇದರ ನಡುವೆ ನಮ್ಮ ಪಕ್ಷದ ಕಡೆಯಿಂದ ಅನರ್ಹತೆ ಅರ್ಜಿ ನಿಮ್ಮ ಬಳಿ ಬಂದಿದೆ ಅಂತ ಗೊತ್ತಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಅನರ್ಹತೆ ವಿಚಾರ ಸಂಬಂಧ ಪಕ್ಷದ ಕಡೆಯಿಂದ ಯಾವುದೇ ನೋಟಿಸ್ ಬಂದಿಲ್ಲ. ಆದರೆ ಇಂದು ನೀವು ಹಾಜರಾಗಿ ಎಂದು ನೋಟಿಸ್ ನೀಡಿದ್ದೀರಿ. ಕೆಲ ಅನಿವಾರ್ಯ ಕಾರಣಗಳಿಂದ ನಾವು ಹೊರಗಡೆ ಇದ್ದು ನಿಮ್ಮ ಪ್ರಶ್ನೆ ಉತ್ತರಿಸಲು ನಮಗೆ 4 ವಾರಗಳ ಸಮಯ ಬೇಕು ಎಂದು ಸ್ಪೀಕರ್ ಅವರಿಗೆ ಅತೃಪ್ತ ಶಾಸಕರು ಪತ್ರ ಬರೆದಿದ್ದಾರೆ.

Leave a Reply

Your email address will not be published. Required fields are marked *