ಮೋದಿಯವರೇ ಐದು ದಿನ ನನ್ನನ್ನು ಪ್ರಧಾನಿಯನ್ನಾಗಿ ಮಾಡಿ; ಇಡೀ ದೇಶವನ್ನೇ ಬದಲಾವಣೆ ಮಾಡುತ್ತೇನೆ: ಹುಚ್ಚ ವೆಂಕಟ್

ನ್ಯೂಸ್ ಕನ್ನಡ ವರದಿ(08-04-2018): ಮೋದಿಯವರೇ ನನ್ನನ್ನು ಕೇವಲ ಐದು ದಿನ ಪ್ರಧಾನಿಯನ್ನಾಗಿ ಮಾಡಿ ನೋಡಿ, ಇಡೀ ದೇಶವನ್ನೇ ಬದಲಾವಣೆ ಮಾಡಿ ವಿಶ್ವದ ನಂ.1 ದೇಶವನ್ನಾಗಿ ಪಕಿವರ್ತಿಸುತ್ತೇನೆ ಎಂದು ಹುಚ್ಚ ವೆಂಕಟ್ ಹೇಳಿದ್ದಾರೆ.

ಮಡಿಕೇರಿಯ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್,ನಾನು ಶಾಸಕನಾಗಿ ಮುಂದೆ ಮುಖ್ಯಮಂತ್ರಿ ಕೂಡಾ ಆಗುತ್ತೇನೆ. ನಂತರ ಪ್ರಧಾನಿ ಕೂಡ ಆಗುತ್ತೇನೆ. ಪ್ರಧಾನಿ ಮೋದಿಯವರಲ್ಲಿ ಮನವಿ ಮಾಡುತ್ತೇನೆ, ನನಗೆ ಕೇವಲ 5 ದಿನ ಪ್ರಧಾನಿಯಾಗುವ ಅವಕಾಶ ನೀಡಿದರೆ ದೇಶವನ್ನು ಬದಲಾಯಿಸುತ್ತೇನೆ. ಇಡೀ ವಿಶ್ವವೇ ಭಾರತ ನಂ. 1 ಎನ್ನುವಂತೆ ಮಾಡುತ್ತೇನೆ ಎಂದು ಅವರು ಹೇಳಿದರು.

ಸಾಮಾಜಿಕ ಕಳಕಳಿಯ ಚಿತ್ರಗಳನ್ನು ನಿರ್ಮಿಸುತ್ತಾ ಜನರ ಸೇವೆಯನ್ನು ಮಾಡುತ್ತಿದ್ದೇನೆ. ಇದೀಗ ರಾಜಕೀಯವಾಗಿ ಜನರ ಸೇವೆ ಮಾಡಲು ಮುಂದಾಗಿದ್ದೇನೆ. ಈ ಹಿನ್ನಲೆಯಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ ಎಂದು ತಿಳಿಸಿದರು. ನನ್ನ ತತ್ವ ಸಿದ್ಧಾಂಗಳನ್ನು ಬರುವವರನ್ನು ಸ್ವಾಗತಿಸುತ್ತೇನೆ ಎಂದರು.

Leave a Reply

Your email address will not be published. Required fields are marked *