ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ನೇಮಕ? ಸುದ್ದಿ ಓದಿ..
ನ್ಯೂಸ್ ಕನ್ನಡ ವರದಿ: ಲೋಕಸಭಾ ಚುನಾವಣೆ ಫಲಿತಾಂಶ ನಂತರ ದೇಶದಾದ್ಯಂತ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಕಟ್ಟಬೇಕೆಂದು ಕಾಂಗ್ರೆಸ್ ಪಕ್ಷದ ನಾಯಕರು ಅರಿತಿದ್ದು, ಪಕ್ಷ ಅಧಿಕಾರದಲ್ಲಿದ್ದ ಕೆಲವೇ ರಾಜ್ಯಗಳಲ್ಲಿ ಒಂದಾದ ಕರ್ನಾಟಕ ಇದೀಗ ಕಾಂಗ್ರೆಸ್ ಕೈಯಿಂದ ತಪ್ಪಿ ಬಿಜೆಪಿ ತೆಕ್ಕೆಗೆ ಬಿದ್ದಿದ್ದು, ಇದೀಗ ಅಧಿಕಾರ ಕಳೆದುಕೊಂಡ ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಬಹಳಷ್ಟು ಶಕ್ತಿಯುತವಾಗಿ ಕಟ್ಟಲು ಹೈಕಮಾಂಡ್ ಚಿಂತನೆ ನಡೆಸಿದೆ.
ಈಗಾಗಲೇ ಪಕ್ಷದ ಟ್ರಬಲ್ ಶೂಟರ್ ಎಂದೇ ಬಿಂಬಿತವಾಗಿರುವ ಡಿ.ಕೆ ಶಿವಕುಮಾರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಿಸಿ ಅವರ ಮೂಲಕ ರಾಜ್ಯದ ಜನರಲ್ಲಿ ಹೊಸ ಉತ್ಸಾಹ ಹಾಗೂ ಪಕ್ಷ ಸಂಘಟಿಸುವ ಕೆಲಸ ಮಾಡಲು ಪಣತೊಟ್ಟಿದೆ ಎನ್ನಲಾಗಿದ್ದು. ಇದೀಗ ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಹೊರಹೋಗಿರುವ ಶಾಸಕರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಬಲಿಷ್ಠ ಅಭ್ಯರ್ಥಿಯನ್ನು ನಿಲ್ಲಿಸಿ ಗೆಲ್ಲಿಸಿ ಪಕ್ಷ ಬಿಟ್ಟವರಿಗೂ, ಬಿಜೆಪಿಗೂ ತಮ್ಮ ಸಾಮರ್ಥ್ಯ ತೊರಿಸಿಕೊಡಬೇಕು, ಈ ಕೆಲಸ ಮಾಡಲು ಸಿದ್ದರಾಮಯ್ಯನವರ ಮಾರ್ಗದರ್ಶನ ಹಾಗೂ ಮುಂದಾಳತ್ವ ಒಳ್ಳೆದು ಎಂದು ಹೈಕಮಾಂಡ್ ಚಿಂತನೆ ನಡೆಸಿದೆ.