ರಾಜ್ಯದಲ್ಲಿ ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಕುಮಾರಸ್ವಾಮಿ ಹೇಳಿದ್ದೇನು? ಓದಿ
ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇದ್ದ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರವನ್ನು ಆಪರೇಷನ್ ಕಮಲ ನಡೆಸಿ ಕೆಡವಿ ಇದೀಗ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಯಡಿಯುರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಜೆಡಿಎಸ್ ಬಾಹ್ಯ ಬೆಂಬಲ ನೀಡಲಿದೆ ಎಂಬ ಸುದ್ದಿಗೆ ಮಾಜಿ ಸಿಎಂ ಕುಮಾರಸ್ವಾಮಿ ತೆರೆ ಎಳೆದಿದ್ದಾರೆ.
‘ಬಿಜೆಪಿ ಜೊತೆಗೆ ಸಂಬಂಧ ಬೆಸೆಯುವ ಆಧಾರ ರಹಿತ ಸುದ್ದಿಗಳನ್ನು ಗಮನಿಸಿದ್ದೇನೆ. ಸತ್ಯಕ್ಕೆ ದೂರವಾದ ಈ ರೀತಿಯ ಊಹಾಪೋಹಗಳಿಗೆ ನಮ್ಮ ಶಾಸಕರು ಹಾಗೂ ಕಾರ್ಯಕರ್ತರು ಕಿವಿಗೊಡಬೇಕಾಗಿಲ್ಲ. ಜನಸೇವೆಯ ಮೂಲಕ ಪಕ್ಷವನ್ನು ಕಟ್ಟೋಣ. ನಮ್ಮ ಜನಪರ ಹೋರಾಟ ನಿರಂತರ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.