ಮೈತ್ರಿ ಸರ್ಕಾರ ಬೀಳಿಸಿದ ಅತೃಪ್ತರಿಗೆ ಜನರೂ ತಕ್ಕ ಶಿಕ್ಷೆ ನೀಡಲಿದ್ದಾರೆ!: ಕಾಂಗ್ರೆಸ್

 

ನ್ಯೂಸ್ ಕನ್ನಡ ವರದಿ: ಬೆಂಗಳೂರು: ಅತೃಪ್ತ ಶಾಸಕರ ಅನರ್ಹಗೊಳಿಸಿದ ಸ್ಪೀಕರ್ ತೀರ್ಪನ್ನು ಸ್ವಾಗತಿಸುತ್ತೇವೆ. ಪಕ್ಷಕ್ಕೆ ಹಾಗೂ ಮತದಾರರಿಗೆ ದ್ರೋಹ ಮಾಡಿದಕ್ಕೆ ನ್ಯಾಯಾಲಯ ಕೂಡ ಶಾಸಕರಿಗೆ ತಕ್ಕ ಶಿಕ್ಷೆ ನೀಡಲಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಸೋಮವಾರ ನೂತನ ಮುಖ್ಯಮಂತ್ರಿಗಳು ಬಹುಮತ ಸಾಬೀತುಪಡಿಸುವ ಮುನ್ನ ದಿನವೇ 14 ಅತೃಪ್ತ ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ. ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟ್ವಿಟ್ಟರ್ ಖಾತೆಯಿಂದ ಟ್ವೀಟ್ ಮಾಡಿ ಅತೃಪ್ತ ಶಾಸಕರ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಸ್ಪೀಕರ್ ನಿರ್ಧಾರವನ್ನು ಸ್ವಾಗತಿಸುತ್ತೇವೆ ಎಂದಿದೆ.

ಅತೃಪ್ತ ಶಾಸಕರ ಅನರ್ಹಗೊಳಿಸಿದ ಮಾನ್ಯ ಸಭಾಧ್ಯಕ್ಷರು ಕೊಟ್ಟಿರುವ ತೀರ್ಪನ್ನು ಸ್ವಾಗತಿಸುತ್ತೇವೆ. ಮೈತ್ರಿ ಸರ್ಕಾರವನ್ನು ಉರುಳಿಸಬೇಕೆಂದೇ ಬಿಜೆಪಿಯೊಂದಿಗೆ ಕೈ ಜೋಡಿಸಿ ತಮ್ಮ ಪಕ್ಷಗಳಿಗೆ, ತಮ್ಮನ್ನು ಆಯ್ಕೆ ಮಾಡಿದ ಜನತೆಗೆ ದ್ರೋಹ ಬಗೆದ ಈ ಶಾಸಕರುಗಳಿಗೆ ಜನತಾ ನ್ಯಾಯಾಲಯ ಕೂಡ ತಕ್ಕ ಶಿಕ್ಷೆಯನ್ನು ವಿಧಿಸಲಿದೆ ಎಂದು ಬರೆದು ಟ್ವೀಟ್ ಮಾಡಲಾಗಿದೆ.

Leave a Reply

Your email address will not be published. Required fields are marked *