ಟಿಪ್ಪು ಜಯಂತಿ ರದ್ದು: ಯಡ್ಡಿಯನ್ನು ಟೀಕಿಸಿದ ಸಿದ್ದರಾಮಯ್ಯ!
ಟಿಪ್ಪು ಜಯಂತಿ ರದ್ದು: ಯಡ್ಡಿಯನ್ನು ಟೀಕಿಸಿದ ಸಿದ್ದರಾಮಯ್ಯ!
ಟಿಪ್ಪು ಜಯಂತಿಯನ್ನು ರದ್ದು ಗೊಳಿಸಿ ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಇನ್ನು ಮುಂದೆ ಟಿಪ್ಪು ಜಯಂತಿ ಆಚರಣೆ ಮಾಡದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ರಾಜ್ಯ ಸರ್ಕಾರದಿಂದ ಸೂಚನೆ ನೀಡಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ “ಬಿ.ಎಸ್.ಯಡಿಯೂರಪ್ಪನವರು ಕೈಯಲ್ಲಿ ಕತ್ತಿ ಹಿಡಿದು ಟಿಪ್ಪು ವೇಷ ಹಾಕಿ ಕುಣಿದಾಡುತ್ತಾ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದರು. ಈಗ ಸಂಘ ಪರಿವಾರವನ್ನು ಖುಷಿಪಡಿಸಲು ಟಿಪ್ಪು ಜಯಂತಿಯನ್ನು ರದ್ದು ಮಾಡಿದ್ದಾರೆ” ಎಂದು ಟ್ವೀಟ್ ಮಾಡುವ ಮೂಲಕ ಟೀಕಿಸಿದ್ದಾರೆ.
ಬಿ.ಎಸ್.ಯಡಿಯೂರಪ್ಪನವರು ಕೈಯಲ್ಲಿ ಕತ್ತಿ ಹಿಡಿದು ಟಿಪ್ಪು ವೇಷ ಹಾಕಿ ಕುಣಿದಾಡುತ್ತಾ ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ದರು. ಈಗ ಸಂಘ ಪರಿವಾರವನ್ನು ಖುಷಿಪಡಿಸಲು ಟಿಪ್ಪು ಜಯಂತಿಯನ್ನು ರದ್ದು ಮಾಡಿದ್ದಾರೆ. pic.twitter.com/gePSjztY6s
— Siddaramaiah (@siddaramaiah) July 30, 2019