ದಕ್ಷ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನೇ ಎತ್ತಂಗಡಿ ಮಾಡಿದ ಯಡಿಯುರಪ್ಪ!
ದಕ್ಷ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನ ರಾಜ್ಯ ಬಿಜೆಪಿ ಸರ್ಕಾರ ಎತ್ತಂಗಡಿ ಮಾಡಿದೆ!
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕೇವಲ ಒಂದುವರೆ ತಿಂಗಳ ಹಿಂದೆಯಷ್ಟೇ ಅಧಿಕಾರ ಸ್ವೀಕರಿಸಿದ್ದ ದಕ್ಷ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರನ್ನ ರಾಜ್ಯ ಬಿಜೆಪಿ ಸರ್ಕಾರ ಎತ್ತಂಗಡಿ ಮಾಡಿದೆ.
ಅಲೋಕ್ ಕುಮಾರ್ ಅವರನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಹೆಚ್ಚುವರಿ ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಭಾಸ್ಕರ್ ರಾವ್ ನೇಮಕ ಮಾಡಲಾಗಿದೆ.
35 ವರ್ಷಗಳ ನಂತರ ಇದೀಗ ಬೆಂಗಳೂರಿನವರೇ ಆದ ಭಾಸ್ಕರ್ ರಾವ್ ಅವರನ್ನು ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ.