ವಿಧಿ 370 ಮತ್ತು 35ಎ ರದ್ಧತಿ ವಿರೋಧಿಸಿ ಪಾಕಿಸ್ತಾನ ಮಾಡಿದ್ದೇನು ಗೊತ್ತೆ?
ನ್ಯೂಸ್ ಕನ್ನಡ ವರದಿ: ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ ೩೭೦ನೇ ವಿಧಿ ರದ್ದುಗೊಳಿಸಿದ ಭಾರತದ ಕ್ರಮಕವನ್ನು ಪಾಕಿಸ್ತಾನ ಖಂಡಿಸಿದೆ. ಜಮ್ಮು-ಕಾಶ್ಮೀರ ವಿಚಾರವಾಗಿ ಭಾರತ ಕೈಗೊಂಡ ನಿರ್ಧಾರವನ್ನು ನಾವು ಎಂದಿಗೂ ಒಪ್ಪುವುದಿಲ್ಲ ಎಂದು ಪಾಕ್ ತಿಳಿಸಿದೆ.
ಕಣಿವೆ ರಾಜ್ಯ ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಇಬ್ಭಾಗಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧ ವ್ಯಕ್ತಪಡಿಸಿರುವ ಪಾಕಿಸ್ತಾನ ಭಾರತದ ನಿರ್ಧಾರವನ್ನು ತಾವು ಎಂದಿಗೂ ಒಪ್ಪುವುದಿಲ್ಲ. ಈ ಕ್ರಮದ ವಿರುದ್ಧ ತೆಗೆದುಕೊಳ್ಳಬಹುದಾದ ಕ್ರಮದ ಬಗ್ಗೆ ಚಿಂತಿಸುವುದಾಗಿ ಪಾಕಿಸ್ತಾನ ತಿಳಿಸಿದೆ. ಅಲ್ಲದೇ, ಈ ಬಗ್ಗೆ ಪಾಕಿಸ್ತಾನ ವಿದೇಶಾಂಗ ಸಚಿವಾಲಯ ನೋಟೀಸ್ ಕೂಡ ಹೊರಡಿಸಿದೆ.
Pakistan Ministry of Foreign Affairs statement on Article 370: As the party to this international dispute, Pakistan will exercise all possible options to counter the illegal steps. Pakistan reaffirms its abiding commitment to the Kashmir cause.
— ANI (@ANI) August 5, 2019