ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ನೇಮಕ?

ಕಾಂಗ್ರೆಸ್‌ ಪಕ್ಷದ ಪ್ರಭಾವಿ ನಾಯಕರಾದ ಡಿ.ಕೆ. ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಇಬ್ಬರಿಗೂ ಎಐಸಿಸಿ ಸಿಹಿ ಸುದ್ದಿ ನೀಡಲಿದೆ ಎನ್ನಲಾಗಿದೆ.

ಪ್ರಭಾವಿ ಸಮುದಾಯಗಳಿಗೆ ಸೇರಿದ ಈ ಇಬ್ಬರು ನಾಯಕರ ಹೆಸರು ಈ ಹಿಂದೆಯೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮತ್ತು ವಿರೋಧ ಪಕ್ಷ ಸ್ಥಾನಕ್ಕೆ ಕೇಳಿ ಬಂದಿತ್ತು. ಈಗ ಈ ಕುತೂಹಲಕ್ಕೆ ತೆರೆ ಬೀಳುವ ಸಂಗತಿಯೊಂದು ಸುದ್ದಿಯಲ್ಲಿದೆ, ಕೆಪಿಸಿಸಿ ಅದ್ಯಕ್ಷರಾಗಿ ಡಿಕೆ ಶಿವಕುಮಾರ್ ನೇಮಕ ಮತ್ತು ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ನೇಮಕವಾಗುವ ಎಲ್ಲಾ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *