ಮಾನ ಮರ್ಯಾದೆ ಇದ್ದರೆ ಕಾಂಗ್ರೆಸ್ ಕಚೇರಿಗೆ ಕಾಲಿಡಬೇಡಿ: ಕೆ.ಎಚ್.ಮುನಿಯಪ್ಪ
ನ್ಯೂಸ್ ಕನ್ನಡ ವರದಿ: ಕಳೆದ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ಗೆ ದ್ರೋಹ ಬಗೆದವರಿಗೆಲ್ಲಾ ಮಾನ ಮರ್ಯಾದೆ ಇದ್ದರೆ ಕಾಂಗ್ರೆಸ್ ಕಚೇರಿಗೆ ಕಾಲಿಡಬಾರದು ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಮಾಲೂರಿನಲ್ಲಿ ಬುಧವಾರ ನಡೆದ ಕಾಂಗ್ರೆಸ್ ಸತ್ಯ ಶೋಧನಾ ಸಮಿತಿ ಸಭೆಯ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಕುಮಾರ್, ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ನಸೀರ್ ಅಹಮದ್, ಕೊತ್ತೂರು ಮಂಜುನಾಥ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿರುವ ರಮೇಶ್ ಕುಮಾರ್ಗೆ ಮಾನ ಮರ್ಯಾದೆ ಇಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ವೋಟ್ ಹಾಕ್ಬೇಡಿ ಅಂತ ಚುನಾವಣಾ ಪ್ರಚಾರ ಮಾಡಿದ್ದ ಇವರು ಕಾಂಗ್ರೆಸ್ ಕಚೇರಿ ಬರ್ತಾರೆ, ಇವರು ಚುನಾವಣೆಯಲ್ಲಿ ಮಾಡಿದ ಪಕ್ಷ ದ್ರೋಹದ ವಿರುದ್ಧ ನಾನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದೇನೆ.