ಕೋಲ್ಕತ್ತಾ ತಂಡಕ್ಕೆ 177 ರನ್ ಗಳ ಗುರಿ ನೀಡಿದ ರಾಯಲ್ ಚಾಲೆಂಜರ್ಸ್

ನ್ಯೂಸ್ ಕನ್ನಡ ವರದಿ-(08.04.18)ದೇಶದಾದ್ಯಂತ ಇಂಡಿಯನ್ ಪ್ರೀಮಿಯರ್ ಲೀಗ್ ಹವಾ ಪ್ರಾರಂಭಗೊಂಡಿದೆ. ನಿನ್ನೆ ತಾನೇ ಐಪಿಎಲ್ ಅಧಿಕೃತವಾಗಿ ಉದ್ಘಾಟನೆಗೊಂಡಿತ್ತು. ಪ್ರಥಮ ಪಂದ್ಯದಲ್ಲಿ ಮುಖಾಮುಖಿಯಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯಾಟವು ವೀಕ್ಷಕರನ್ನು ತುದಿಗಾಲಿನಲ್ಲಿ ನಿಲ್ಲಿಸುವಲ್ಲಿ ಸಫಲವಾಗಿತ್ತು. ಇದೀಗ ಇಂದು ನಡೆದ ಎರಡನೇ ಪಂದ್ಯಾಟದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಡೆಲ್ಲಿ ಡೇರ್ ಡೆವಿಲ್ಸ್ ತಂಡವನ್ನು ಮಣಿಸಿತ್ತು. ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳುರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಪಂದ್ಯ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ತಂಡವು 7 ವಿಕೆಟ್ ಗಳ ನಷ್ಟಕ್ಕೆ 176 ರನ್ ಪೇರಿಸಿದೆ.

ಬೆಂಗಳುರು ತಂಡದ ಪ್ರಮುಖ ಆಟಗಾರನಾಗಿರುವ ಎಬಿಡಿ ವಿಲಿಯರ್ಸ್ ಇಂದು ನಡೆದ ಪಂದ್ಯಾಟದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದ ಮೂಲಕ ಸ್ಫೋಟಕ ಪ್ರದರ್ಶನ ತೋರಿದ್ದಾರೆ. ಆರಂಭದಿಂದಲೂ ಆಕ್ರಮಣಕಾರಿ ಆಟವನ್ನು ಪ್ರದರ್ಶಿಸಿದ ವಿಲಿಯರ್ಸ್ 5 ಸಿಕ್ಸರ್ ಗಳನ್ನು ಸಿಡಿಸಿದರು. ಕೇವಲ 23 ಎಸೆತಗಳಲ್ಲಿ 44 ರನ್ ಗಳಿಸಿದ ಎಬಿಡಿ ವಿಲಿಯರ್ಸ್ ತಮ್ಮ ಚಿತ್ರ ವಿಚಿತ್ರ ಶೈಲಿಯ ಬ್ಯಾಟಿಂಗ್ ಮೂಲಕ ಕೋಲ್ಕತ್ತಾ ತಂಡದ ಆಟಗಾರರ ಬೆವರಿಳಿಸಿದರು. ನಾಯಕ ವಿರಾಟ್ ಕೊಹ್ಲಿ 33 ರನ್ ಗಳಿಸಿದರು. ಭಾರತೀಯ ಆಟಗಾರ ಮನ್ ದೀಪ್ ಸಿಂಗ್ ಈ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದು, ಕೇವಲ 18 ಎಸೆತಗಳಲ್ಲಿ 37 ರನ್ ಗಳಿಸಿದರು. ಅಲ್ಲದೇ ವಿನಯ್ ಕುಮಾರ್ ಎಸೆದ ಕೊನೆಯ ಓವರ್ ನಲ್ಲಿ ಭರ್ಜರಿ 2 ಸಿಕ್ಸರ್ ಸಿಡಿಸಿದರು. ಕೋಲ್ಕತ್ತಾ ತಂಡದ ಪರ ನಿತೀಶ್ ರಾಣಾ ವಿಲಿಯರ್ಸ್ ಮತ್ತು ಕೊಹ್ಲಿಯನ್ನು ಔಟ್ ಮಾಡುವ ಮೂಲಕ ಉತ್ತಮ ಬೌಲಿಂಗ್ ಪ್ರದರ್ಶನ ತೋರಿದರು.

Leave a Reply

Your email address will not be published. Required fields are marked *