ಆರ್ಥಿಕ ಸಂಕಷ್ಟದಿಂದಾಗಿ ಹಲವರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ!: ಕೇಂದ್ರದ ವಿರುದ್ಧ ದೇವೇಗೌಡ ಕಿಡಿ
ನ್ಯೂಸ್ ಕನ್ನಡ ವರದಿ: ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ ಅರ್ ಬಿಐ ನಿಂದ ದೊಡ್ಡಪ್ರಮಾಣ ಹಣ ಪಡೆದಿರುವುದೇ ಸಾಕ್ಷಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ಜೆ.ಪಿ.ಭವನದಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ ಸಭೆಯಲ್ಲಿ ಮಾತನಾಡಿದ ಅವರು, ‘ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದೆ. ಇನ್ನೊಂದೆಡೆ ಭಾರತೀಯ ರಿಸರ್ವ್ ಬ್ಯಾಂಕಿನಿಂದ ಇಷ್ಟೊಂದು ಹಣ ತೆಗೆದುಕೊಂಡಿದ್ದಾರೆ. ಕೇಂದ್ರ ಸರ್ಕಾರ ಹಿಂದೆಂದೂ ಈ ಪ್ರಮಾಣದಲ್ಲಿ ಹಣ ತೆಗೆದುಕೊಂಡಿರಲಿಲ್ಲ ಎಂದು ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.
‘ತಮಗೆ ಲಭಿಸಿರುವ ಮಾಹಿತಿ ಅನ್ವಯ ಹಲವು ಸರ್ಕಾರಿ ಇಲಾಖೆಗಳ ನೌಕರರಿಗೆ ಸಂಬಳ ಆಗಿಲ್ಲ.
ಸರ್ಕಾರಿ ಸ್ವಾಮ್ಯದ ಹಲವು ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತಿದ್ದಾರೆ. ಆರ್ಥಿಕ ಸಂಕಷ್ಟದಿಂದಾಗಿ ಹಲವರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಚುನಾವಣೆ ಬಳಿಕ 6 ಲಕ್ಷ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಯಾವ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಎಂದು ಕೇಂದ್ರ ಸರ್ಕಾರದ ಆಡಳಿತವನ್ನು ಟೀಕಿಸಿದ್ದಾರೆ.