ಸುಪ್ರೀಂಕೋರ್ಟ್ ನಿಂದ ಐತಿಹಾಸಿಕ ‘ಅಯೋಧ್ಯೆ ತೀರ್ಪು’ ಪ್ರಕಟ: ಸುದ್ದಿ ಓದಿ

ನ್ಯೂಸ್ ಕನ್ನಡ ವರದಿ: ಇಡೀ ದೇಶದ ಜನತೆ ಕುತೂಹಲದಿಂದ ವೀಕ್ಷಿಸುತ್ತಿರುವ ಐತಿಹಾಸಿಕ ಅಯೋಧ್ಯೆ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ ಪ್ರಕರಣದ ಅಂತಿಮ ತೀರ್ಪು ಪ್ರಕಟಣೆಯಾಗಿದೆ.

ಟ್ರಸ್ಟ್‌ ರಚಿಸಲು, ವಿವಾದಿತ ಜಾಗದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮತ್ತು ಮಸೀದಿಗೆ ಪರ್ಯಾಯ ಭೂಮಿ ನೀಡಲು ಸರ್ಕಾರಕ್ಕೆ 3-4 ತಿಂಗಳ ಗಡುವು ವಿಧಿಸಿದ ಸುಪ್ರೀಂ ಕೋರ್ಟ್.

ಸುನ್ನಿ ವಕ್ಫ್‌ ಬೋರ್ಡ್‌ಗೆ ಮಸೀದಿ ನಿರ್ಮಾಣಕ್ಕೆ ಬೇರೆಡೆ ಪ್ರತ್ಯೇಕ 5 ಎಕರೆ ಭೂಮಿ ನೀಡುವಂತೆ ಸರ್ಕಾರಕ್ಕೆ ಆದೇಶ.

ಮಂದಿರ ನಿರ್ಮಾಣ ಹೊಣೆ ಸರ್ಕಾರಕ್ಕೆ, ನಿರ್ವಹಣೆ ಹೊಣೆ ಟ್ರಸ್ಟ್‌ಗೆ ನೀಡುವಂತೆ ಸರ್ಕಾರಕ್ಕೆ ಆದೇಶ.

ವಿವಾದಿತ ಜಮೀನು ರಾಮಲಲ್ಲಾಗೆ ಸೇರಿದ್ದು, ಮಂದಿರ ನಿರ್ಮಾಣಕ್ಕೆ ನಿಯಮ ರೂಪಿಸಿ ಎಂದ ಸುಪ್ರೀಂ ಕೋರ್ಟ್‌.

ಐವರು ಸದಸ್ಯರ ಸಾಂವಿಧಾನಿಕ ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ, ನ್ಯಾಯಮೂರ್ತಿಗಳಾದ ಎಸ್‌ ಎ ಬೊಬ್ಡೆ, ಡಿ.ವೈ.ಚಂದ್ರಚೂಡ್, ಅಶೋಕ್ ಭೂಷಣ್ ಮತ್ತು ಎಸ್.ಅಬ್ದುಲ್ ನಜೀರ್ ಈ ತೀರ್ಪನ್ನು ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *