ಅತ್ಯಾಚಾರದ ಆರೋಪಿಗಳಿಗೆ ಕಠಿಣ  ಶಿಕ್ಷೆ ನೀಡುವ ಕಾನೂನು ರೂಪಿಸಬೇಕು: ಎನ್‌ಎಸ್‌ಯುಐ ಒತ್ತಾಯ

ನ್ಯೂಸ್ ಕನ್ನಡ ವರದಿ: ಇತ್ತೀಚೆಗೆ ಹೈದರಾಬಾದಿನಲ್ಲಿ ನಡೆದ ಪಶುವೈದ್ಯೆಯ ಅತ್ಯಾಚಾರಹಾಗೂ ದಾರುಣ ಸಾವಿಗೆ ಹಾಗೂ ಕಲಬುರಗಿ ಜಿಲ್ಲೆಯ ಯಾಕಾಪುರ ಗ್ರಾಮದಲ್ಲಿ ಬಾಲಕಿಯ ಮೇಲೆ ಹೀನ ಅಪರಾಧಕ್ಕೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಉಡುಪಿ ಜಿಲ್ಲಾ ಎನ್ ಎಸ್ ಯು ಐ  ಆಗ್ರಹಿಸುತ್ತದೆ.

ಭಾರತದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಅಪರಾಧ ಕೃತ್ಯಗಳು ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿ. ಆದರೆ, ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣ ಬಹಳ ಕಡಿಮೆ ಪ್ರಮಾಣದಲ್ಲಿ ಆಗುತ್ತಿದೆ.  ಸಾರ್ವಜನಿಕ ಪ್ರದೇಶಗಳಲ್ಲಿ ಮಹಿಳೆಯರಿಗೆ ಅಸುರಕ್ಷಿತ ಭಾವನೆ ಬೇರೂರಿದ್ದು, ಹೈದರಾಬಾದಿನ ವೈದ್ಯೆ ಹಾಗೂ ಕಲಬುರಗಿ ಜಿಲ್ಲೆಯ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ತ್ವರಿತಗತಿಯ ನ್ಯಾಯಾಲಯಕ್ಕೆ ಹಸ್ತಾಂತರಿಸಿ ಅತ್ಯಾಚಾರಿಗಳು ಹಾಗೂ ಕೊಲೆಗಾರರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮಾಡಬೇಕು’ ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ಅತ್ಯಾಚಾರದ ಆರೋಪಿಗಳಿಗೆ ಕಠಿಣ  ಶಿಕ್ಷೆ ನೀಡುವ ಕಾನೂನು ರೂಪಿಸಬೇಕು ಎಂದು ಸಂಘಟನೆ ಆಗ್ರಹಿಸುತ್ತದೆ.
 
ಕ್ರಿಸ್ಟನ್ ಡಿ’ಆಲ್ಮೇಡಾ  ,
ಅಧ್ಯಕ್ಷರು, ಎನ್ ಎಸ್ ಯು ಐ, ಉಡುಪಿ ಜಿಲ್ಲೆ

Leave a Reply

Your email address will not be published. Required fields are marked *