ಉಪಚುನಾವಣೆಯಲ್ಲಿ ಸೋಲು: ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಸಿದ್ದು ಹೇಳಿದ್ದೇನು ಗೊತ್ತೆ?
ನ್ಯೂಸ್ ಕನ್ನಡ ವರದಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇನ್ನು ತಮ್ಮ ರಾಜೀನಾಮೆ ಪತ್ರವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಿಗೆ ರವಾನಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಇಂದು ಸುದ್ದಿಗೋಷ್ಟಿ ನಡೆಸಿದ ಸಿದ್ದರಾಮಯ್ಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬೈಎಲೆಕ್ಷನ್ ನಲ್ಲಿ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದಾಗಿ ಸಿದ್ದರಾಮಯ್ಯ ತಿಳಿಸಿದರು. ತಾವು ಪ್ರಜಾಪ್ರಭುತ್ವದಲ್ಲಿ ಬಲವಾದ ನಂಬಿಕೆ ಇಟ್ಟಿದ್ದೇನೆ.
ಪ್ರಜಾಪ್ರಭುತ್ವದ ಉಳಿವಿನ ದೃಷ್ಟಿಯಿಂದ , ಪ್ರಜಾತಂತ್ರದ ಕೆಲವು ಮೌಲ್ಯಗಳನ್ನು ಎತ್ತಿ ಹಿಡಿಯಬೇಕಿದ್ದು, ಪಕ್ಷದ ಹಿತದೃಷ್ಟಿಯಿಂದ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ತಮ್ಮ ರಾಜೀನಾಮೆ ರವಾನಿಸುತ್ತಿರುವುದಾಗಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ಇನ್ನು ಇದೇ ವೇಳೆ ಸುದ್ದಿಗೋಷ್ಟಿಯಲ್ಲಿ ಪ್ರಶ್ನೆಗಳ ಸುರಿಮಳೆಯೇ ಆಯಿತು. ಆದರೆ, ಸಿದ್ದರಾಮಯ್ಯ ಇವುಗಳಿಗೆ ಉತ್ತರಿಸದೇ ಸುದ್ದಿಗೋಷ್ಟಿಯಿಂದ ತೆರಳಿದರು.