ಮಂಗಳೂರಿನಲ್ಲಿ ನಡೆದ ಹಿಂಸಾಚಾರ ‘ಕಾಂಗ್ರೆಸ್ ಪ್ರಾಯೋಜಿತ ಗಲಭೆ’: ಶೋಭಾ ಕರಂದ್ಲಾಜೆ ಆರೋಪ
ನ್ಯೂಸ್ ಕನ್ನಡ ವರದಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ವೇಳೆ ಮಂಗಳೂರಿನಲ್ಲಿ ನಡೆದ ಹಿಂಸಾಚಾರ `ಕಾಂಗ್ರೆಸ್ ಪ್ರಾಯೋಜಿತ ಗಲಭೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಹಿಂಸಾಚಾರದಲ್ಲಿ ಮೃತರ ಕೈವಾಡದ ಬಗ್ಗೆ ತನಿಖೆ ನಡೆಯುತ್ತಿದೆ. ಗಲಭೆಯಲ್ಲಿ ಭಾಗವಹಿಸಿದ್ದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪರಿಹಾರ ಘೋಷನೆ ಬಗ್ಗೆ ಮರುಪರಿಶೀಲನೆ ನಡೆಸಲಾಗುತ್ತದೆ ಎಂದರು.
ಇನ್ನು ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರಿಗೆ ಪರಿಹಾರ ಘೋಷಣೆ ಮಾಡಿಲ್ಲ. ಅಪರಾಧಿಗಳಿಗೆ ಪರಿಹಾರ ನೀಡಿದ ನಿದರ್ಶನವಿಲ್ಲ. ಅಪರಾಧಿಗಳಿಗೆ ಇನ್ನೂ ಪರಿಹಾರ ಕೊಟ್ಟಿಲ್ಲ ಎಂದು ಹೇಳಿದ್ದಾರೆ.