ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಮೂವರು ಉಗ್ರರನ್ನು ಬೇಟೆಯಾಡಿದ ಸೈನಿಕರು!

ನ್ಯೂಸ್ ಕನ್ನಡ ವರದಿ: (29.08.2020): ವಿಶ್ವದಾದ್ಯಂತ ಕೊರೊನಾ ವೈರಸ್ ಭೀತಿಯು ವ್ಯಾಪಕಾವಾಗಿ ಹರಡುತ್ತಿರುವ ಈ ಪ್ರತಿಕೂಲ ಸನ್ನಿವೇಶದಲ್ಲೂ ಕೂಡಾ ಉಗ್ರಗಾಮಿಗಳ ಉಪಟಳವು ಹೆಚ್ಚಾಗುತ್ತಲೇ ಇದೆ. ಇದೀಗ ಭಾರತೀಯ ಸೈನಿಕರು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು ನಡೆದ ಎನ್ ಕೌಂಟರ್ ನಲಲಿ ಜಮ್ಮು ಕಾಶ್ಮೀರ ಪೊಲೀಸ್, ಭಾರತೀಯ ಸೈನ್ಯ ಹಾಗೂ ಸಿ ಆರ್ ಪಿ ಎಫ್ ಜಂಟಿ ಕಾರ್ಯಾಚಾರಣೆಯಲ್ಲಿ ಝಡೂರ ಎಂಬ ಪ್ರದೇಶದಲ್ಲಿ ಮೂವರು ಉಗ್ರಗಾಮಿಗಳನ್ನು ಎನ್ ಕೌಂಟರ್ ಮಾಡಲಾಗಿದೆ.

ಗಾಯಗೊಂಡಿದ್ದ ಓರ್ವ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎನ್ ಕೌಂಟರ್ ನಡೆದ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತರಾದ ಉಗ್ರರು ಯಾವ ಸಂಘಟನೆಯವರೆಂದು ಇನ್ನಷ್ಟೇ ತಿಳಿಯಬೇಕಿದೆ. ಎನ್ ಕೌಂಟರ್ ಮುಕ್ತಾಯಗೊಂಡಿದೆಯೋ ಇಲ್ಲವೋ ಎಂಬ ಬಗ್ಗೆಯೂ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ. ಆ.29 ರಂದು ರಾತ್ರಿ 1 ಗಂಟೆಗೆ ಈ ಗುಂಡಿನ ಚಕಮಕಿ ಪ್ರಾರಂಭವಾಗಿದೆ ಎಂದು ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *