ನಿಮ್ಮ ಸುಳ್ಳು ಆರೋಪ ನನ್ನ ರಾಜಕೀಯವಾಗಿ ಮುಗಿಸಲು ಸಾಧ್ಯವಿಲ್ಲ: ಜಮೀರ್ ಅಹ್ಮದ್

ನ್ಯೂಸ್ ಕನ್ನಡ ವರದಿ: ಚಿತ್ರನಟಿ ಸಂಜನಾ ಅವರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಹೋಗಿದ್ದಾರೆಂದು ಮಾಧ್ಯಮಗಳಲ್ಲಿ ಆರೋಪ ಮಾಡಿದ್ದಾರೆ. ಈ ಬಗ್ಗೆ ಸಂಜನಾ ಏನಾದರೂ ದಾಖಲೆ ಕೊಟ್ಟಿದ್ದಾರೆಯೇ? ಇದೀಗ ಬಿಜೆಪಿ ಮುಖಂಡರು ಸಂಜನಾ ಅವರನ್ನು ಬಿಟ್ಟು ಫಾಸಿಲ್ ಬಗ್ಗೆ ಮಾತನಾಡುತ್ತಿದ್ದಾರೆ. ಅವರೇನೇ ಹೇಳಿದರೂ ನಾನು ಯಾವ ತಪ್ಪೂ ಮಾಡಿಲ್ಲ, ರಾಜ್ಯದಲ್ಲಿ ಮಾದಕ ವಸ್ತುಗಳ ಜಾಲದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸತ್ಯಾಂಶ ಬೆಳಕಿಗೆ ಬರಲಿದೆ. ಸಂಜನಾ ಜೊತೆ ತಾನು ತೆರಳಿದ್ದ ಬಗ್ಗೆ ಪ್ರಶಾಂತ್ ಸಂಬರಗಿ ಹೇಳಿದ್ದಾರೆ. ಈ ಬಗ್ಗೆ ಪೋಟೋಗಳಿದ್ದರೆ ತೋರಿಸಲಿ ಎಂದು ಜಮೀರ್ ಅಹ್ಮದ್ ಖಾನ್ ಆಗ್ರಹಿಸಿದರು.

ನನ್ನ ವಿರುದ್ಧ ಆರೋಪ ಮಾಡುತ್ತಿರುವುದರ ಹಿಂದೆ ರಾಜಕೀಯ ಕೈವಾಡವಿದ್ದು, ನಾನು ಬೆಳೆಯುತ್ತಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನನ್ನನ್ನು ಮುಗಿಸಬೇಕು ಎಂದು ತೀರ್ಮಾನ ಮಾಡಿದ್ದಾರೆ, ನಮ್ಮ ರಾಜ್ಯ ಪೊಲೀಸರು ಉತ್ತಮ ರೀತಿಯಲ್ಲಿ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸುವ ವಿಶ್ವಾಸವಿದೆ. ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಪ್ರಶಾಂತ್ ಸಂಬರಗಿ ವಿರುದ್ಧ ಪೊಲೀಸರಿಗೆ ದೂರು ನೀಡುತ್ತಿದ್ದೇನೆ, ಕಾನೂನು ಹೋರಾಟ ನಡೆಯುತ್ತಿದೆ ಎಂದ ಅವರು, ಪ್ರಶಾಂತ್ ಸಂಬರಗಿ ನನ್ನ ವಿರುದ್ಧ ಎಲ್ಲಿಯೂ ಡ್ರಗ್ಸ್ ಆರೋಪ ಮಾಡಿಲ್ಲ. ನನಗೂ ಫಾಸಿಲ್‍ಗೂ ಯಾವುದೇ ಸಂಪರ್ಕವಿಲ್ಲ. ಆರೋಪಿಯೊಂದಿಗೆ ಫೋಟೊ ಇದ್ದರೆ ನಾನು ತಪ್ಪಿತಸ್ಥನಾಗಲು ಸಾಧ್ಯವೇ? ಎಂದು ಪ್ರಶ್ನಿಸಿದರು.

Leave a Reply

Your email address will not be published. Required fields are marked *