ವಿಜಯೇಂದ್ರ ಮುಂದೆ ಮುಖ್ಯಮಂತ್ರಿ ಆಗಲಿದ್ದಾರೆ: ಭವಿಷ್ಯ ನುಡಿದ ಬಿಜೆಪಿ ಶಾಸಕ
ನ್ಯೂಸ್ ಕನ್ನಡ ವರದಿ: ನಮ್ಮ ಮುಖ್ಯಮಂತ್ರಿ ಯಡಿಯುರಪ್ಪನವರೇ ಪೂರ್ಣಾವಧಿಗೆ ಮುಖ್ಯಮಂತ್ರಿ. ಇದು ಸೂರ್ಯ ಚಂದ್ರ ಇರುವಷ್ಟೇ ಸತ್ಯ. ಮುಖ್ಯಮಂತ್ರಿ ಬದಲಾವಣೆ ಚರ್ಚೆಯಿಂದ ಯಾರಿಗೆ ಖುಷಿಯಾಗುತ್ತೋ ಅವರೇ ಇದನ್ನೆಲ್ಲ ಹುಟ್ಟುಹಾಕಿದ್ದಾರೆ ಎಂದು ಹಾಸನ ಶಾಸಕ ಪ್ರೀತಮ್ ಗೌಡ ಹೇಳಿದ್ದಾರೆ.

ಯಡಿಯುರಪ್ಪನವರ ಪುತ್ರ ವಿಜಯೇಂದ್ರ ಅವರು ಕರ್ನಾಟಕ ಸರ್ಕಾರದ ಸೂಪರ್ ಸಿಎಂ ಎಂಬ ಪ್ರತಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಪ್ರೀತಮ್, ಅವರ ಪ್ರಭಾವ ಹೆಚ್ಚಾಗುತ್ತಿದ್ದು, ರಾಜ್ಯದ ನಾಯಕತ್ವ ವಹಿಸಿಕೊಳ್ಳಲು ಮುಂದಾಳತ್ವದಲ್ಲಿ ಬರುತ್ತಿದ್ದಾರೆ. ಅವರು ಬೆಳೆಯುತ್ತಿದ್ದಾರೆ ಎಂದು ಹೀಗೆ ವಿರೋಧ ಪಕ್ಷದವರು ಹೀಗೆ ಮಾತನಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸಿಎಂ ಆಗುವ ಎಲ್ಲ ಅರ್ಹತೆ ಮತ್ತು ಯೋಗ್ಯತೆಯನ್ನು ಅವರು ಇಟ್ಟುಕೊಂಡಿದ್ದಾರೆ. ಹೀಗಾಗಿ ಅವರು ಸೂಪರ್ ಸಿಎಂ ಅಲ್ಲ ಮುಂದೊಂದು ದಿನ ಸಿಎಂ ಆಗುತ್ತಾರೆ ಎಂದು ಭವಿಷ್ಯ ನುಡಿದರು.