ಡಿಕೆಶಿ ವಿರುದ್ಧ ಮೋದಿ ಸರಕಾರದ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ: ಸಿದ್ದು ಗರಂ

ನ್ಯೂಸ್ ಕನ್ನಡ ವರದಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ನಡೆಸಿರುವ ದಾಳಿಯನ್ನು ಸಿದ್ದರಾಮಯ್ಯನವರು ತೀವ್ರವಾಗಿ ಖಂಡಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಸರಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ.  ಬಿಜೆಪಿ ಪ್ರತೀಕಾರದ ರಾಜಕೀಯದಲ್ಲಿ ನಿರತವಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ, ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಡಿಕೆಶಿ ಮೇಲಿನ ಈ ದಾಳಿ ಮೂಲಕ ಸಾರ್ವಜನಿಕ ಗಮನವನ್ನು ಬೇರೆಡೆಗೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಡಿಕೆ ಶಿವಕುಮಾರ್ ಅವರ ಮೇಲೆ ನಡೆದಿರುವ ಇವತ್ತಿನ ಸಿಬಿಐ ದಾಳಿಯು ಉಪಚುನಾವಣೆಯಲ್ಲಿನ ನಮ್ಮ ಸಿದ್ಧತೆಯನ್ನು ಹಳಿ ತಪ್ಪಿಸುವ ಮತ್ತೊಂದು ಪ್ರಯತ್ನವಾಗಿದೆ. ಇದನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

Your email address will not be published. Required fields are marked *