ಮಮತಾ ಬ್ಯಾನರ್ಜಿಯ ಟಿಎಂಸಿಯನ್ನು ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲಿದೆ!: ಷಾ

ನ್ಯೂಸ್ ಕನ್ನಡ ವರದಿ: ಮುಂದಿನ ವರ್ಷ ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪರಿವರ್ತನೆ ನಡೆಯಲಿದೆ. ಇದು ಅನಿವಾರ್ಯವಾಗಿದೆ, ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾವು ಚುನಾವಣೆ ಸಂದರ್ಭದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತೇವೆ. ಪಶ್ಚಿಮ ಬಂಗಾಳದಲ್ಲಿ ಹೊಸ ಬದಲಾವಣೆ ಬರಲಿದೆ ಎಂಬ ಆಶಾಭಾವನೆ ಇದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಾವು ಪಶ್ಚಿಮ ಬಂಗಾಳದಲ್ಲಿಯೂ ಸರ್ಕಾರ ರಚಿಸುತ್ತೇವೆ ಎಂದ ಅವರು, ಸದ್ಯ ಬಂಗಾಳದ ಜನರು ತೃಣಮೂಲ ಕಾಂಗ್ರೆಸ್​ನ್ನು ತೊಡೆದುಹಾಕಲು ಬಯಸುತ್ತಿದ್ದಾರೆ. ಇದು ಅತ್ಯಂತ ಮುಖ್ಯವಾಗಿದೆ ಎಂದರು. ಪಶ್ಚಿಮ ಬಂಗಾಳದಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ 42 ಸ್ಥಾನಗಳಲ್ಲಿ 14 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು.

Leave a Reply

Your email address will not be published. Required fields are marked *