ಮಂತ್ರಿಯಾಗಲು ಯಾರ ಕಾಲು ಹಿಡಿಯುವ ಕೆಲಸ ಮಾಡುವ ಜಾಯಮಾನ ನನ್ನದಲ್ಲ!: ಯತ್ನಾಳ್ ಗರಂ

ನ್ಯೂಸ್ ಕನ್ನಡ ವರದಿ: ವಿಜಯಪುರ: ಸಚಿವ ಸ್ಥಾನದ ಕುರಿತು ಆಗಾಗ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದೀಗ ಮತ್ತೆ ಹರಿಹಾಯ್ದಿದ್ದು, ಸಚಿವನಾಗುವುದಕ್ಕೆ ಯಾರದ್ದೋ ಕಾಲು, ತಲೆ ಹಿಡಿಯುವ ಕೆಲಸ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ. ಟ್ವೀಟ್ ಮೂಲಕ ಮತ್ತೆ ಅಸಮಾಧಾನ ಹೊರಹಾಕಿರುವ ಯತ್ನಾಳ್, ಸಿಎಂಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಕರ್ನಾಟಕದ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇನೆ. ಆತ್ಮಸಾಕ್ಷಿಯಾಗಿ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ. ಸಚಿವನಾಗುವುದಕ್ಕೆ ಯಾರದ್ದೋ ಕಾಲು, ತಲೆ ಹಿಡಿಯುವ ಕೆಲಸ ಮಾಡಿಲ್ಲ. ಅದು ನನ್ನ ಜಾಯಮಾನವೂ ಅಲ್ಲ ಎಂದು ಟ್ವಿಟ್‍ನಲ್ಲಿ ಮತ್ತೆ ನೇರವಾಗಿ ಬರೆದುಕೊಂಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಬಹಳ ದಿನ ಉಳಿಯಲ್ಲ ಎಂದು ಸಿಎಂ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದರು. ಯತ್ನಾಳ್ ಹೇಳಿಕೆ ಬಿಜೆಪಿಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸಿಎಂ ಬಿ.ಎಸ್‍ವೈ ಅವರಿಗೂ ಈ ಹೇಳಿಕೆ ಇರಿಸು ಮುರಿಸು ಉಂಟು ಮಾಡಿತ್ತು.

Leave a Reply

Your email address will not be published. Required fields are marked *