ವಿಶ್ವಕಪ್ ಗೆದ್ದ ಭಾರತೀಯ ಕ್ರಿಕೆಟ್ ತಂಡದ ದಿಗ್ಖಜ ಕಪಿಲ್ ದೇವ್’ಗೆ ಹೃದಯಾಘಾತ!

ನ್ಯೂಸ್ ಕನ್ನಡ ವರದಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು ಇಲ್ಲಿನ ಖಾಸಗೀ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದಾರೆ. ಸದ್ಯ 61 ವರ್ಷದ ಕಪಿಲ್ ದೇವ್ ಅವರಿಗೆ ಆಂಜಿಯೋ ಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತಿದೆ.

ಕಪಿಲ್‌ ದೇವ್‌ ಅವರಿಗೆಗೆ ಹೃದಯಾಘಾತವಾಗಿರುವ ವಿಚಾರವನ್ನು ಖ್ಯಾತ ಪತ್ರಕರ್ತೆ ಟೀನಾ ಠಾಕರ್ ತಮ್ಮ ಟ್ವಿಟರ್‌ನಲ್ಲಿ ಹಾಕಿಕೊಂಡಿದ್ದಾರೆ. ಕಪಿಲ್ ದೇವ್ 1983ರಲ್ಲಿ ಇಂಗ್ಲೆಂಡ್​ನಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ನಾಯಕನಾಗಿ ಪ್ರಮುಖ ಪಾತ್ರವಹಿಸಿದ್ದರು.

Leave a Reply

Your email address will not be published. Required fields are marked *