ಅರ್ನಾಬ್ ಬಂಧನ ತುರ್ತುಪರಿಸ್ಥಿತಿ ದಿನಗಳನ್ನು ನೆನಪಿಸುತ್ತಿದೆ: ಕೇಂದ್ರ ಸಚಿವ ಜಾವಡೇಕರ್

ನ್ಯೂಸ್ ಕನ್ನಡ ವರದಿ: ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿರುವುದಕ್ಕೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಖಂಡನೆ ವ್ಯಕ್ತಪಡಿಸಿದ್ದಾರೆ. “ಮಹಾರಾಷ್ಟದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ. ಇದು ಮಾಧ್ಯಮವನ್ನು ನಡೆಸಿಕೊಳ್ಳುವ ರೀತಿಯಲ್ಲ. ಈ ರೀತಿಯ ನಡೆವಳಿಕೆಯು ತುರ್ತು ಪರಿಸ್ಥಿತಿಯ ದಿನಗಳನ್ನುನೆನಪಿಸುತ್ತಿದೆ” ಎಂದು ಜಾವಡೇಕರ್ ಟ್ವೀಟ್ ಮಾಡಿದ್ದಾರೆ.

2018 ರ ಆತ್ಮಹತ್ಯೆಯ ಪ್ರಕರಣವೊಂದಕ್ಕೆ ಸಂಧಪಟ್ಟು ಇಂಟೀರಿಯರ್ ಡಿಸೈನರ್ ಒಬ್ಬರ ಆತ್ಮಹತ್ಯೆ ಪ್ರಕರಣವನ್ನು ಮುಂಬೈ ಪೊಲೀಸರು ಮರು ತನಿಖೆ ಪ್ರಾರಂಭಿಸಿದ್ದರು, ಇದೀಗ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಕೌಂಟರ್ ಸ್ಪೆಷಲಿಸ್ಟ್ ಪೊಲೀಸ್ ಅಧಿಕಾರಿ ಸಚಿನ್ ವಾಝೆ ನೇತೃತ್ವದ ರಾಯಗಢ್ ಪೊಲೀಸರು ಅರ್ನಬ್ ಗೋಸ್ವಾಮಿಯ ಮುಂಬೈ ನಿವಾಸಕ್ಕೆ ಬಂದು ಬಂಧಿಸಿ ರಾಯಗಢ್ ಠಾಣೆಗೆ ಕರೆದೊಯ್ಯುತ್ತಿದ್ದಾರೆ.

Leave a Reply

Your email address will not be published. Required fields are marked *