ಉಪಚುನಾವಣೆ ಫಲಿತಾಂಶದ ನಂತರ ಯಡಿಯುರಪ್ಪ ಖುರ್ಚಿ ಪತನ!: ಸಿದ್ದರಾಮಯ್ಯ ಭವಿಷ್ಯ

ನ್ಯೂಸ್ ಕನ್ನಡ ವರದಿ: ಉಪಚುನಾವಣೆ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು. ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡ್ತಾರೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯುವುದಿಲ್ಲ. ಖಡಾಖಂಡಿತವಾಗಿಯೂ ಯಡಿಯೂರಪ್ಪ ಬದಲಾಗ್ತಾರೆ. ನನಗೆ ದೆಹಲಿಯಿಂದ ಬಂದಿರುವ ಮಾಹಿತಿ ಆಧಾರದ ಮೇಲೆ ಹೇಳುತ್ತಿದ್ದೇನೆ. ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿರುವುದು ಸಹ ಒಂದು ಕಾರಣ ಇರಬಹುದು. ಹಲವು ದಿನದಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಗಾಗಿ ಉಪಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಹೇಳಿದರು.


ಎರಡು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಇದೆ. ಶಿರಾದಲ್ಲಿ ಜಯಚಂದ್ರ ಗೆಲ್ತಾರೆ. ಆರ್ ಆರ್ ನಗರದಲ್ಲಿ ಕುಸುಮಾ ಗೆಲ್ಲುವ ಸಾಧ್ಯತೆ ಇದೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಇದು ಕಾಂಗ್ರೆಸ್ ಪರವಾದ ಮತಗಳಾಗಿವೆ. ಶಿರಾದಲ್ಲಿ ಕಳೆದ ಬಾರಿ ಅಪಪ್ರಚಾರ ಆಗಿತ್ತು. ಆರ್ ಆರ್ ನಗರದಲ್ಲಿ ಕಳೆದ ಬಾರಿ ಕಾಂಗ್ರೆಸ್ ಗೆದ್ದಿತ್ತು. ಇದರ ಜೊತೆಗೆ ನಾವೆಲ್ಲ ಪ್ರಚಾರ ಮಾಡಿದಾಗಲು ಜನರು ಕಾಂಗ್ರೆಸ್ ಪರ ಒಲವು ತೋರಿದ್ದರು. ಈ ಎಲ್ಲ ಕಾರಣದಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದರು.

Leave a Reply

Your email address will not be published. Required fields are marked *