ಸಿಎಂ ಸ್ಥಾನ ಹೋದ ನಂತರ ಸಿದ್ದರಾಮಯ್ಯನಿಗೆ ಹುಚ್ಚು ಹಿಡಿದಿದೆ!: ಸಚಿವ ಈಶ್ವರಪ್ಪ

ನ್ಯೂಸ್ ಕನ್ನಡ ವರದಿ: ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆ ಶೀಘ್ರದಲ್ಲಿ ಆಗಲಿದೆ ಎಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಗ್ರಾಮೀಣಾಭಿವೃಧ್ಧಿ ಸಚಿವ ಈಶ್ವರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯನಿಗೆ ಹುಚ್ಚು. ಮುಖ್ಯಮಂತ್ರಿ ಸ್ಥಾನ ಹೋದ ನಂತರ ಸಿದ್ದರಾಮಯ್ಯನಿಗೆ  ಹುಚ್ಚು ಹಿಡಿದು ಹೋಗಿದೆ. ರಾಜ್ಯದಲ್ಲಿ ಯಾಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕು ಎಂದು ಕಿಡಿಕಾರಿದರು.

ಉಡುಪಿ ಶ್ರೀಕೃಷ್ಣನ ಮಠದಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನಿಗೆ ಆಕಾಶದಿಂದ ಸುದ್ದಿ ಉದುರಿದೆಯಾ? ಮೋದಿ, ನಡ್ಡಾ, ಅಮಿತ್ ಶಾ ಫೋನ್ ಮಾಡಿ ಹೇಳಿದ್ರಾ?ನೀವು ಜನರ ಮಧ್ಯೆ ಹೋಗಿ ಕೆಲಸ ಮಾಡಿ. ನಾನು ದೇವಸ್ಥಾನದಲ್ಲಿ ಇದೀನಿ, ಇಲ್ಲದಿದ್ದರೆ ಇನ್ನೂ ಕೆಟ್ಟ ಪದ ಹೇಳ್ತಿದ್ದೆ ಎಂದು ಈಶ್ವರಪ್ಪ ಏಕವಚನದಲ್ಲೇ ಕಿಡಿಕಾರಿದರು.

Leave a Reply

Your email address will not be published. Required fields are marked *