ಈ ಬಾರಿ ದೀಪಾವಳಿಗೆ ಪಟಾಕಿ ನಿಷೇಧ: ಸಿಎಂ ಯಡಿಯುರಪ್ಪ ಘೋಷಣೆ

ನ್ಯೂಸ್ ಕನ್ನಡ ವರದಿ: ಈ ಬಾರಿ ದೀಪಾವಳಿಗೆ ಯಾವುದೇ ರೀತಿಯ ಪಟಾಕಿಗೆ ಅವಕಾಶ ಇರೋದಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದಿಂದ ಪಟಾಕಿ ನಿಷೇಧಕ್ಕೆ ನಿರ್ಧಾರ ಮಾಡಲಾಗಿದೆ. ಅಲ್ಲದೆ ಪಟಾಕಿ ನಿಷೇಧಿಸಿ ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವುದಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ ವೈ ಪಟಾಕಿ ನಿಷೇಧ ಕುರಿತಿದ್ದ ಸುದ್ದಿಗೆ ಸ್ಪಷ್ಟನೆ ನೀಡಿದ್ದಾರೆ.

ಇದೇ ವೇಳೆ ಉಪಚುನಾವಣೆ ಫಲಿತಾಂಶ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ನೂರಕ್ಕೆ ನೂರು ಎರಡೂ ಕ್ಷೇತ್ರಗಳಲ್ಲಿ ಗೆಲ್ಲಲಿದ್ದೇವೆ. ನಾನು ಹೇಳಬೇಕಾದರೆ ನೂರಾರು ಬಾರಿ ಲೆಕ್ಕಾಚಾರ ಹಾಕಿನೇ ನಾನು ಹೇಳೋದು. ಇದುವರೆಗೂ ನಾನು ಹೇಳಿದ್ದು ಸುಳ್ಳಾಗಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *