ಅಮೆರಿಕದ ನೂತನ ಅಧ್ಯಕ್ಷ ಜೋ ಬಿಡೆನ್, ಕಮಲಾ ಹ್ಯಾರೀಸ್​ಗೆ ಅಭಿನಂದನೆ ಕೋರಿದ​ ಪ್ರಧಾನಿ ಮೋದಿ!

ನ್ಯೂಸ್ ಕನ್ನಡ ವರದಿ:ಡೊನಾಲ್ಡ್​ ಟ್ರಂಪ್ ಅವರನ್ನು ಹಿಂದಿಕ್ಕಿ ಅಮೆರಿಕದ 4ನೇ ಅಧ್ಯಕ್ಷರಾಗಿ ಡೆಮಾಕ್ರಟಿಕ್ ಪಕ್ಷದ ಜೋ ಬಿಡೆನ್ ಆಯ್ಕೆಯಾಗಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಅಮೆರಿಕದ ಚುನಾವಣೆಯಲ್ಲಿ ಡೊನಾಲ್ಡ್​ ಟ್ರಂಪ್ ಎರಡನೇ ಬಾರಿ ಅಧಿಕಾರಕ್ಕೇರಲು ಕನಸು ಕಂಡಿದ್ದರು. ಆದರೆ, ಆ ಕನಸು ಭಗ್ನವಾಗಿದ್ದು, ಜೋ ಬಿಡೆನ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ನಾಯಕರು ಜೋ ಬಿಡೆನ್​ಗೆ ಟ್ವಿಟ್ಟರ್​ನಲ್ಲಿ ಅಭಿನಂದನೆ ತಿಳಿಸಿದ್ದಾರೆ.

ಜೋ ಬಿಡೆನ್ ಅವರ ಅದ್ಭುತವಾದ ಗೆಲುವಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಧ್ಯಕ್ಷರಾಗಿ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧವನ್ನು ಗಟ್ಟಿಗೊಳಿಸಲು ನಿಮ್ಮ ಸಹಕಾರ ಬೇಕಾಗಿದೆ. ಭಾರತ ಮತ್ತು ಅಮೆರಿಕದ ಸಂಬಂಧವನ್ನು ಇನ್ನಷ್ಟು ಬಿಗಿಗೊಳಿಸಲು ನಾವು ನಿಮ್ಮೊಂದಿಗೆ ಕೆಲಸ ಮಾಡಲು ಕಾತುರರಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *