ಕಾಪು: ಟ್ಯಾಂಕರ್ ಸೂಚನಾ ಫಲಕಕ್ಕೆ ಡಿಕ್ಕಿ; ಚಾಲಕ ಅಪಾಯದಿಂದ ಪಾರು

ನ್ಯೂಸ್ ಕನ್ನಡ ವರದಿ ಕಾಪು : ಚಾಲಕ ನಿಯಂತ್ರಣ ಕಳೆದುಕೊಂಡ ಅನಿಲ ಟ್ಯಾಂಕರ್ ಹೆದ್ದಾರಿ ನಾಮ ಸೂಚನಾ ಫಲಕಕ್ಕೆ ಡಿಕ್ಕಿಹೊಡೆದ ಘಟನೆ ಕಾಪು ಸಮೀಪದ ಉಳಿಯರಗೋಳಿ ಬಳಿ ಸಂಭವಿಸಿದೆ.

ಉಡುಪಿ ಕಡೆಯಿಂದ ಮಂಗಳೂರಿನತ್ತ ಸಾಗುತ್ತಿದ್ದ ಅನಿಲ ಟ್ಯಾಂಕರ್ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಉಳಿಯರಗೋಳಿ ಸಮೀಪಿಸುತ್ತಲೇ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಪಕ್ಕದಲ್ಲಿ ಅಳವಡಿಸಿದ ಸೂಚನಾ ಫಲಕ್ಕೆ ಡಿಕ್ಕಿಹೊಡೆದ ಪರಿಣಾಮ ನಾಮ ಸೂಚನಾ ಫಲಕ ಮುರಿದಿದ್ದು,ವಾಹನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಚಾಲಕನಿಗೆ ಅಲ್ಪಸ್ವಲ್ಪ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಕಾಪು ಪೊಲೀಸರು ದಾವಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *