ಟಿಕೆಟ್ ಘೋಷಣೆಯ ಬೆನ್ನಲ್ಲೇ ಬಿಜೆಪಿಯಲ್ಲಿ ಕೇಳಿಬರುತ್ತಿದೆ ಬಂಡಾಯದ ಧ್ವನಿ!

ನ್ಯೂಸ್ ಕನ್ನಡ ವರದಿ(09-04-2018): ಕರ್ನಾಟಕ ವಿಧಾನಸಭಾ ಚುನಾವಣೆಗೆ 72 ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗುತ್ತಿದ್ದಂತೆ ಪಕ್ಷದೊಳಗೆ ಟಿಕೆಟ್ ವಂಚಿತರು ಹಾಗೂ ಅವರ ಸಮರ್ಥಕರಿಂದ ಆಕ್ರೋಶ ಕೇಳಿ ಬರುತ್ತಿದ್ದು, ಪಕ್ಷದಲ್ಲಿ ಬಂಡಾಯದ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿದೆ.

ಬೆಂಗಳೂರಿನ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರು ಚಿಕ್ಕಪೇಟೆ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್.ಆರ್.ರಮೇಶ್ ಅವರಿಗೆ ಟಿಕೆಟ್ ತಪ್ಪಿಸಿದ್ದಾರೆಂದು ರಮೇಶ್ ಬೆಂಬಲಿಗರು ಆರೋಪಿಸಿದ್ದು, ಪದ್ಮನಾಭ ನಗರದಲ್ಲಿ ಆರ್.ಅಶೋಕ್ ವಿರುದ್ಧ ರಮೇಶ್ ಅವರನ್ನು ಕಣಕ್ಕಿಳಿಸುವುದಾಗಿ ಘೋಷಿಸಿದ್ದಾರೆ. ರಮೇಶ್ ಅವರಿಗೆ ಟಿಕೆಟ್ ಕೈತಪ್ಪಲು ಆರ್.ಅಶೋಕ್ ಅವರೇ ಕಾರಣ ಎಂದು ಆರೋಪಿಸಿ ರಮೇಶ್ ಬೆಂಬಲಿಗರು ಅಶೋಕ್ ಅವರಿಗೆ ದಿಕ್ಕಾರ ಕೂಗಿದ ಘಟನೆಯು ನಡೆದಿದೆ.

ಇನ್ನೊಂದು ಕಡೆ ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸೋಮಣ್ಣ ಬೇವಿನಮರದ ತನಗೆ ಟಿಕೆಟ್ ಕೈತಪ್ಪಿದ್ದರಿಂದ ಆಕ್ರೋಶತರಾಗಿದ್ದಾರೆ. ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿರುದ್ಧ ಪಕ್ಷೇತರನಾಗಿ ಕಣಕ್ಕಿಳಿಯುವುದಾಗಿ ಬೇವಿನಮರದ ಸ್ಪಷ್ಟಪಡಿಸಿದ್ದಾರೆ. ಒಟ್ಟಿನಲ್ಲಿ ಪಕ್ಷದಲ್ಲಿ ಅಕ್ರೋಶ ಮುಗಿಲು ಮುಟ್ಟಿದ್ದು, ಬಂಡಾಯ ಅಭ್ಯರ್ಥಿಗಳ ಪಟ್ಟಿ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *