ಪಾದಚಾರಿ ಮಾರ್ಗಕ್ಕೆ ನುಗ್ಗಿದ ಟ್ರಕ್; 15 ಮಂದಿ ಕಾರ್ಮಿಕರು ದಾರುಣ ಸಾವು

ಸೂರತ್: ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್ ವೊಂದು ಇದ್ದಕ್ಕಿದ್ದಂತೆ ಪಾದಚಾರಿ ಮಾರ್ಗಕ್ಕೆ ನುಗ್ಗಿದ ಪರಿಣಾಮ ಪಾದಚಾರಿ ಮಾರ್ಗದಲ್ಲಿ ಮಲಗಿದ್ದ 15 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಇಂದು ಗುಜರಾತ್’ನ ಸೂರತ್ ನಗರದ ಕೊಸಂಬಾದಲ್ಲಿ ಸಂಭವಿಸಿದೆ.

ಇಂದು ಬೆಳಗಿನ ಜಾವ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ್ದ ಟ್ರಕ್ ಇದ್ದಕ್ಕಿದ್ದಂತೆ ಪಾದಚಾರಿ ಮಾರ್ಗಕ್ಕೆ ನುಗ್ಗಿದೆ.

ದುರ್ಘಟನೆ ಸಂಭವಿಸುವ ವೇಳೆ ಪಾದಚಾರಿ ಮಾರ್ಗದಲ್ಲಿ ಕಾರ್ಮಿಕರು ಮಲಗಿದ್ದರೆಂದು ಹೇಳಲಾಗುತ್ತಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸಾವನ್ನಪ್ಪಿದ್ದ ಎಲ್ಲರೂ ಕಾರ್ಮಿಕರಾಗಿದ್ದು, ರಾಜಸ್ಥಾನ ಮೂಲದವರಾಗಿದ್ದಾರೆಂದು ಪೊಲೀಸರು ಹೇಳಿದ್ದಾರೆ.

ಪ್ರಧಾನಿ ಮೋದಿ ತೀವ್ರ ಸಂತಾಪ….

ದುರ್ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸೂರತ್ ಟ್ರಕ್ ಅಪಘಾತದಲ್ಲಿ ಹಲವು ಜನರು ಸಾವನ್ನಪ್ಪಿರುವುದು ದುರಂತ. ಮೃತರ ಕುಟುಂಬಸ್ಥರ ಕುರಿತು ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

Leave a Reply

Your email address will not be published. Required fields are marked *