ಬಿಜೆಪಿ ಭಿನ್ನಮತ ಸ್ಫೋಟ: ಯಡಿಯೂರಪ್ಪ ಭಾವಚಿತ್ರಕ್ಕೆ ಬೆಂಕಿ, ಚಪ್ಪಲಿಯಿಂದ ಹೊಡೆತ!
ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವಾರು ಹೊಸ ಹೊಸ ರಾಜಕೀಯ ಬೆಳವಣಿಗೆಗಳು ಕಂಡುಬರುತ್ತಿದೆ. ಬಿಜೆಪಿ ತನ್ನ ಮೊದಲ ಟಿಕೆಟ್ ಪಟ್ಟಿ ಬಿಡುಗಡೆ ಮಾಡಿದ ನಂತರ ಹಲವಾರು ಭಿನ್ನಮತ ಸ್ಫೋಟಗೊಂಡಿದೆ. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಬೀದಿಗೆ ಇಳಿದು ಬಿ.ಎಸ್. ವೈ ಪ್ರತಿಕೃತಿ ದಹಿಸಿರೋ ಘಟನೆ ಬೈಲಹೊಂಗದಲ್ಲಿ ನಡೆದಿದೆ. ಬೈಲಹೊಂಗದ ಹಾಲಿ ಶಾಸಕ ವಿಶ್ವನಾಥ ಪಾಟೀಲ್ ಮತ್ತು ಮಾಜಿ ಶಾಸಕ ಜಗದೀಶ ಮೆಟಗುಡ್ಡ ಇಬ್ಬರೂ ಪ್ರಬಲ ಆಕಾಂಕ್ಷಿಗಳು. ಆದರೆ, ನಿನ್ನೆ ಬಿಡುಗಡೆಯಾದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಹಾಲಿ ಶಾಸಕ ವಿಶ್ವನಾಥ ಪಾಟೀಲ್ ಟಿಕೆಟ್ ಘೋಷಣೆಯಾಗಿದೆ. ಇದರಿಂದ ಜಗದೀಶ ಮೆಟ್ಟಗುಡ್ಡ ಬೆಂಬಲಿಗರು ಇಂದು ಅವರ ನಿವಾಸದಲ್ಲಿ ಸಭೆ ನಡೆಸಿದರು. ಸಭೆಯ ಬಳಿಯ ಮೆಟಗುಡ್ಡ ಮನೆಯಿಂದ ಸಂಗೊಳ್ಳಿ ರಾಯಣ್ಣ ಸರ್ಕಲ್ವರೆಗೆ ಬೃಹತ್ ಮೆರವಣಿಗೆ ನಡೆಸಿದರು. ಈ ವೇಳೆಯಲ್ಲಿ ಯಡಿಯೂರಪ್ಪ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ತಮ್ಮ ಆಕ್ರೋಶ ಹೊರ ಹಾಕಿದರು.
ನೀತಿ ಸಂಹಿತಿ ಜಾರಿಯಲ್ಲಿದ್ದರೂ ಯಾವುದೇ ಅನುಮತಿ ಇಲ್ಲದೇ ನಗರದಲ್ಲಿ ದಿಢೀರ್ ಧರಣಿಯನ್ನು ಮೆಟಗುಡ್ಡ ಬೆಂಬಲಿಗರು ನಡೆಸಿದ್ರು. ಇನ್ನು, ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿ ಎಸ್ ಯಡಿಯೂರಪ್ಪ ಪ್ರತಿಕೃತಿ ಧಹಿಸಿದ್ರು. ಆದರೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಜಗದೀಶ ಮೆಟಗುಡ್ಡ ಅವರ ಮುಂದಿನ ನಿರ್ಧಾರ ಏನು ಎಂಬುದು ಇನ್ನೂ ನಿಗೂಢವಾಗಿದೆ. ಜಗದೀಶ ಮೆಟಗುಡ್ಡ ಕಳೆದ ಭಾರಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು. ಹಾಲಿ ಶಾಸಕ ವಿಶ್ವನಾಥ ಪಾಟೀಲ್ ಕೆಜೆಪಿಯಿಂದ ಆಯ್ಕೆಯಾಗಿ ನಂತರ ಬಿಜೆಪಿ ಸೇರಿದ್ದರು.