ಕಾಪು: ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರಿಂದ ಊಟ ಉಪಹಾರ; ಪ್ರಕರಣ ದಾಖಲಿಸಿದ ಪೊಲೀಸರು!

ಕಾಪು: ಇತ್ತೀಚೆಗೆ ಕಟಪಾಡಿಯ ಜೆಸಿ ಭವನದಲ್ಲಿ ನಡೆದ ಬಿಜೆಪಿ ಪಕ್ಷದ ಮಹಿಳಾ ಸಭೆಯಲ್ಲಿ ಪಾಲ್ಗೊಂಡವರಿಗೆ ಉಪಹಾರದ ವ್ಯವಸ್ಥೆಯನ್ನು ಮಾಡಿದ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ ಇವರು ನೀತಿ ಸಂಹಿತೆ ವಿರುದ್ಧವಾಗಿ ಫಲಹಾರ ನೀಡಿ ಚುನಾವಣೆ ನೀತಿ ಸಂಹಿತೆ ಉಲಂಘಿಸಿದ ಬಗ್ಗೆ ಸಾಕ್ಷಿ ಸಮೇತವಾಗಿ ಅಧಿಕಾರಿಗಳು ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದರೆ.

ಇತ್ತ ಶಿರ್ವ ಠಾಣಾ ವ್ಯಾಪ್ತಿಯ ಬೆಳಪುವಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿ ಊಟ ಕೊಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ ಚಂದ್ರ ಶೆಟ್ಟಿ ಎಂಬವವರ ಮೇಲೆ ಚುನಾವಣಾಧಿಕಾರಿಗಳು ನೀಡಿದ ದೂರಿನಂತೆ ಶಿರ್ವಾ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *