ಕಾಪು: ಕಾಂಗ್ರೆಸ್ ಪಕ್ಷದಿಂದ ಜೆಡಿಎಸ್ ಗೆ ಸೇರ್ಪಡೆಗೊಂಡ ಕಾರ್ಯಕರ್ತರು!

ನ್ಯೂಸ್ ಕನ್ನಡ ವರದಿ-(09.04.18): ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ , ಶಂಕರಪುರ ಹಾಗೂ ಕಟಪಾಡಿ ವ್ಯಾಪ್ತಿಯ ಕಾಂಗ್ರೇಸ್ ಕಾರ್ಯಕರ್ತರು ಇಮ್ತಿಯಾಸ್ ಹಾಗೂ ಪದ್ಮನಾಭ ಕೋಟ್ಯಾನ್ ರವರ ನೇತೃತ್ವದಲ್ಲಿ ಜೆಡಿಎಸ್ ಜಿಲ್ಲಾ ಕಛೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಅವರನ್ನು ಜಿಲ್ಲಾಧ್ಯಕ್ಷ ಯೋಗೀಶ್.ವಿ.ಶೆಟ್ಟಿಯವರು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಹಮೀದ್ ಉಚ್ಚಿಲ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *