ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರೋಚಕ ಜಯ ಸಾಧಿಸಿದ ಚೆನ್ನೈ ಸೂಪರ್ ಕಿಂಗ್ಸ್!

ನ್ಯೂಸ್ ಕನ್ನಡ ವರದಿ-(10.04.18): ಚೆನ್ನೈನಲ್ಲಿ ಒಂದೆಡೆ ಕಾವೇರಿ ನೀರಿನ ಪ್ರತಿಭಟನೆ ನಡೆಯುತ್ತಿದ್ದು, ಹೀಗಾಗಿ ಐಪಿಎಲ್ ಗೆ ಅವಕಾಶ ನೀಡಬಾರದು ಎಂಬುವುದರ ಕುರಿತು ಚರ್ಚೆಗಳು ನಡೆಯುತ್ತಿದೆ ಮತ್ತು ಪ್ರತಿಭಟನೆಯೂ ನಡೆದಿದೆ. ಈ ನಡುವೆ ಇದೀಗ ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಐಪಿಎಲ್ ಪಂದ್ಯಾಟವು ನಡೆದಿದ್ದು, ರೋಚಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಜಯ ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಆರು ವಿಕೆಟ್ ಗಳ ನಷ್ಟಕ್ಕೆ 202 ರನ್ ಗಳಿಸಿತ್ತು. ಆಂಡ್ರೆ ರಸೆಲ್ 36 ಎಸೆತಗಳಲ್ಲಿ ಭರ್ಜರಿ 88 ರನ್ ಗಳಿಸಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಬಳಿಕ ಬ್ಯಾಟಿಂಗ್ ಗೆ ಆಗಮಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಶೇನ್ ವಾಟ್ಸನ್(42) ಮತ್ತು ಅಂಬಟಿ ರಾಯುಡು(39) ಭದ್ರ ಬುನಾದಿ ಹಾಕಿದರು. ಬಳಿಕ ಆಗಮಿಸಿದ ಮಹೇಂದ್ರ ಸಿಂಗ್ ಧೋನಿ(25), ಬಿಲ್ಲಿಂಗ್ಸ್ (56) ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಕೊನೆಗೆ ಡ್ವೇನ್ ಬ್ರಾವೋ ಮತ್ತು ರವೀಂದ್ರ ಜಡೇಜಾ ತಂಡವನ್ನು ಗೆಲುವಿನ ದಡ ದಾಟಿಸಿದರು.

 

Leave a Reply

Your email address will not be published. Required fields are marked *