ಸಿದ್ದರಾಮಯ್ಯಗೆ ನಮ್ಮ ಮತ ಎಂದ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷನ ವಜಾ!

ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವಾರು ಹೊಸ ಹೊಸ ರಾಜಕೀಯ ಬೆಳವಣಿಗೆಗಳು ಕಂಡುಬರುತ್ತಿದೆ. ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಧರ್ಮದ ಸ್ಥಾನ ನೀಡಬೇಕು ಎಂದು ಕಾಂಗ್ರೆಸ್ ನೇತೃತ್ವದ ಸರ್ಕಾರ ಕೇಂದ್ರಕ್ಕೆ ಶಿಫಾರಸು ನೀಡಿದ್ದು ವೀರಶೈವ ಮಹಾಸಭಾದ ಕೆಂಗಣ್ಣಿಗೆ ಗುರಿಯಾಗಿದ್ದು ಗೊತ್ತೇ ಇದೆ.
ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ನಮ್ಮ ಮತ ಎಂದ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಹೀನೆಕಲ್ ಬಸವರಾಜ್ ಅವರನ್ನು ಆಡಳಿತ ಮಂಡಳಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ವಜಾ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಜಿಲ್ಲಾಧ್ಯಕ್ಷ ಹಿನಕಲ್ ಬಸವರಾಜ್, ಸಂಘಟನಾ ಕಾರ್ಯದರ್ಶಿ ಟಿ.ಎಸ್. ಲೋಕೇಶ್, ಪದಾಧಿಕಾರಿಗಳಾದ ಸಿ.ಗುರುಸ್ವಾಮಿ, ಹಡಜನ ಚಂದ್ರಶೇಖರ್ ಅವರನ್ನು ಮಹಾಸಭಾದ ಕೇಂದ್ರ ಸಮಿತಿ ಸದಸ್ಯ ಪುಟ್ಟಬುದ್ದಿ ವಜಾಗೊಳಿಸಿದ್ದಾರೆ. ಮೈಸೂರಿನ ಗನ್‍ಹೌಸ್ ವೃತ್ತದ ಬಸವ ಪುತ್ಥಳಿಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ಮಹಾಸಭೆ ತೆಗೆದುಕೊಂಡಿದೆ.ಕಾಂಗ್ರೆಸ್ ಬೆಂಬಲಿಸಿ ಎಂದು ಮಾತೇ ಮಹಾದೇವಿ ಹೇಳಿದ ಬಳಿಕ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ವೀರಶೈವ-ಲಿಂಗಾಯತರು ಸಿದ್ದರಾಮಯ್ಯರನ್ನು ಬೆಂಬಲಿಸುತ್ತೇವೆ ಎಂದು ವೀರಶೈವ ಮಹಾ ಸಭಾದ ಜಿಲ್ಲಾಧ್ಯಕ್ಷ ಹಿನಕಲ್ ಬಸವರಾಜ್ ಸಿಎಂ ಸಮ್ಮುಖದಲ್ಲಿ ಪ್ರಮಾಣ ಮಾಡಿದ್ದರು.

ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಎಲ್ಲಾ ವೀರಶೈವ ಸಂಘಟನೆಗಳು, ಬಸವ ಬಳಗಗಳ ಪರವಾಗಿ ಪ್ರಮಾಣ ಮಾಡುತ್ತಿದ್ದೇನೆ ಎಂದು ಹಿನಕಲ್ ಬಸವರಾಜ್ ಹೇಳಿದ್ದರು. ಮುಂದಿನ ಸಿಎಂ ಸಿದ್ದರಾಮಯ್ಯ ಆಗಬೇಕು. ಸಿದ್ದರಾಮಯ್ಯ ಸಿಎಂ ಆದರೆ ರಾಜ್ಯ ಸುಭಿಕ್ಷವಾಗಿರುತ್ತದೆ. ಸಿದ್ದರಾಮಯ್ಯ ವೀರಶೈವ ಲಿಂಗಾಯತರ ವಿರೋಧಿಯಲ್ಲ ಹಿನಕಲ್ ಬಸವರಾಜ್ ಹೇಳಿದ್ದರು

ಮಾಹಿತಿ ಕೃಪೆ ಪಬ್ಲಿಕ್ ಟಿವಿ ಕನ್ನಡ ನ್ಯೂಸ್

Leave a Reply

Your email address will not be published. Required fields are marked *