ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಧಿಕೃತವಲ್ಲ: ಮುಖ್ಯಮಂತ್ರಿ ಸ್ಪಷ್ಟನೆ
ನ್ಯೂಸ್ ಕನ್ನಡ ವರದಿ(11-04-2018): ನಿನ್ನೆಯಿಂದ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಕರ್ನಾಟಕ ವಿಧಾನ ಸಭಾ ಚುನಾವಣೆಯ 131 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯು ಅಧಿಕೃತವಲ್ಲ ಅದು ನಕಲಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರೀಮಯ್ಯ ಸ್ಪಷ್ಟಪಡಿಸಿದ್ದಾರೆ.
ಎಐಸಿಸಿಯ ಮೊಹರನ್ನು ನಕಲಿ ಮಾಡಿ ತಯಾರಿಸಿದ ಈ ಅಭ್ಯರ್ಥಿಗಳ ಪಟ್ಟಿಯಿಂದಾಗಿ ಕಾಂಗ್ರೆಸ್ ಕಾರ್ಯಕರ್ತರು ಗೊಂದಲಕ್ಕೀಡಾಗಿದ್ದು, ಇದನ್ನು ಕೆಲವು ಕಿಡಿಗೇಡಿಗಳು ಪಕ್ಷದೊಳಗೆ ಗೊಂದಲ ಸೃಷ್ಟಿಸಲೆಂದೇ ತಯಾರಿಸಿದ ಪಟ್ಟಿಯಾಗಿದೆ. ಇದರಿಂದಾಗಿ ಕಾಂಗ್ರೆಸ್ ಕಾರ್ಯಕರ್ತರು ಗೊಂದಲಕ್ಕೀಡಾಗಬೇಕಾದ ಅವಶ್ಯಕತೆಯಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯ ಸಭೆ ಮಾತ್ರ ಮುಗಿದಿದ್ದು, ಕೇಂದ್ರ ಚುನಾವಣಾ ಸಮಿತಿಯ.ಸಭೆ ನಡೆಯಲು ಬಾಕಿಯಿದೆ. ಆ ಸಭೆ ನಡೆದ ಬಳಿಕವಷ್ಟೇ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಹೊರಬೀಳಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಪಟ್ಟಿಯಲ್ಲಿ ಯಾರೆಲ್ಲ ಹೆಸರುಗಳಿವೆ ನೋಡಿ: