ಉಚ್ಚಿಲ ಗುರುಪ್ರಸಾದ್ ಭಟ್ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ

ನ್ಯೂಸ್ ಕನ್ನಡ ವರದಿ-(11.04.18): ಕಾಪು : ಜೆಡಿಎಸ್ ಪಕ್ಷದ ಉಚ್ಚಿಲ ಸ್ಥಾನೀಯ ಸಮಿತಿಯ ಉಪಾಧ್ಯಕ್ಷ ಗುರುಪ್ರಸಾದ್ ಭಟ್ ಉಚ್ಚಿಲ ಇವರು ಪಕ್ಷಕ್ಕೆ ರಾಜಿನಾಮೆ ನೀಡಿದ್ದು, ತಮ್ಮ ರಾಜಿನಾಮೆ ಪತ್ರವನ್ನು ಪಕ್ಷದ ಉನ್ನತ ನಾಯಕರಿಗೆ ರವಾನಿಸಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ನಾನು ಜೆಡಿಎಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು , ಉಚ್ಚಿಲ ಸ್ಥಾನೀಯ ಸಮಿತಿ ಉಪಾಧ್ಯಕ್ಷನಾಗಿ, ಅಖಿಲ ಕರ್ನಾಟಕ ನಿಖಿಲ್ ಸೈನ್ಯ ಸಮಿತಿ ಇದರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದೇನೆ.ಇದೀಗ ಪಕ್ಷದೊಳಗಿನ ಭಿನ್ನಾಭಿಪ್ರಾಯದಿಂದ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಈಗಾಗಲೇ ಪಕ್ಷದ ಜಿಲ್ಲಾಧ್ಯಕ್ಷರಿಗೆ ರಾಜಿನಾಮೆ ಪತ್ರವನ್ನು ರವಾನಿಸಿದ್ದೇನೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *