ಕಲಬುರಗಿ: ಬಿಜೆಪಿ ಜಿಲ್ಲಾ ಪ್ರ. ಕಾರ್ಯದರ್ಶಿ ಸಹಿತ 250 ಕಾರ್ಯಕರ್ತರ ರಾಜೀನಾಮೆ! ಕಾಂಗ್ರೆಸ್ ಸೇರ್ಪಡೆ?

ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವಾರು ಹೊಸ ಹೊಸ ರಾಜಕೀಯ ಬೆಳವಣಿಗೆಗಳು ಕಂಡುಬರುತ್ತಿದೆ. ರಾಜಕೀಯ ನಾಯಕರ ಪಕ್ಷಾಂತರ ಪರ್ವವೂ ಶುರುವಾಗಿದೆ. ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಗೊಂಡಿರುವ ಮಾಲೀಕಯ್ಯ ಗುತ್ತೇದಾರ್ ಅವರಿಗೆ ಟಿಕೆಟ್ ನೀಡಿರುವ ಕಾರಣ ಅಫಜಲಪೂರ ಕ್ಷೇತ್ರದ ಮೂಲ ಬಿಜೆಪಿಗರು ತೀವ್ರ ಆಕ್ರೋಶ ಮತ್ತು ಅಸಮಾಧಾನ ವ್ಯಕ್ತ ಪಡಿಸಿದ್ದು. ಮಾಜಿ ಶಾಸಕ ಎಂ.ವೈ ಪಾಟೀಲ್ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ, ಅಫಜಲಪೂರ ತಾಲೂಕಿನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಎಂ.ವೈ ಪಾಟೀಲ್ ಅವರನ್ನು ನಿರ್ಲಕ್ಷಿಸಿ ಮಾಲೀಕಯ್ಯ ಗುತ್ತೇದಾರ್’ಗೆ ಟಿಕೆಟ್ ನೀಡಿದ್ದನ್ನು ಖಂಡಿಸಿ ಅಫಜಲಪೂರದ ಬಿಜೆಪಿ ಪದಾಧಿಕಾರಿಗಳು, ತಾಪಂ , ಪುರಸಭೆಯ ಬಿಜೆಪಿ ಸದಸ್ಯರುಗಳು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಜಮಾದಾರ ಸೇರಿ ತಾಲೂಕು ಪದಾಧಿಕಾರಿಗಳು, ಶಕ್ತಿ ಕೇಂದ್ರದ ಅಧ್ಯಕ್ಷರುಗಳು ಸೇರಿದಂತೆ ಒಟ್ಟು 250 ಕ್ಕೂ ಹೆಚ್ಚು ಬಿಜೆಪಿ ಮುಖಂಡರುಗಳು ತಮ್ಮ ರಾಜೀನಾಮೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಸಲ್ಲಿಸಿದ್ದಾರೆ. ರಾಜೀನಾಮೆ ನೀಡಿರುವ ಬಗ್ಗೆ ಮಾಜಿ ಶಾಸಕ ಎಂ.ವೈ.ಪಾಟೀಲ್ ಸುದ್ದಿಗೋಷ್ಠಿ ವಿಷಯ ತಿಳಿಸಿದ್ದಾರೆ. ಜಿಲ್ಲಾ ಪಂಚಾಯತಿಯ ಐವರು ಸದಸ್ಯರೂ ಸಹ ಬಿಜೆಪಿ ಜೊತೆಗಿದ್ದಾರೆ. ಆದರೆ ತಾಂತ್ರಿಕ ಕಾರಣಗಳಿಂದ ಅವರು ಭಹಿರಂಗವಾಗಿ ಸೇರ್ಪಡೆಯಾಗುತ್ತಿಲ್ಲ

Leave a Reply

Your email address will not be published. Required fields are marked *