ಎಸ್.ಎಂ.ಕೃಷ್ಣ ಜೆಡಿಎಸ್ ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ: ಎಚ್.ಡಿ.ಕುಮಾರಸ್ವಾಮಿ

ನ್ಯೂಸ್ ಕನ್ನಡ ವರದಿ(11-04-2018): ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಜೆಡಿಎಸ್ ಪಕ್ಷಕ್ಕೆ ಬರುವುದಾದರೆ ಅವರನ್ನು ಸ್ವಾಗತಿಸುವುದಾಗಿ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರ ಸ್ವಾಮಿ ಹೇಳಿದ್ದಾರೆ.

ಕೃಷ್ಣ ಅವರಿಗೆ ತನ್ನದೇ ಆದ ಆಭಿಮಾನಿ ವರ್ಗವಿದೆ. ಬಿಜೆಪಿಯು ಮುಖಂಡರನ್ನು ಪಕ್ಷಕ್ಕೆ ಸೇರಿಸುವಾಗ ಅತೀವ ಕಾಳಜಿ ವಹಿಸುತ್ತದೆ ಆದರೆ ಬಳಿಕ ಅವರಿಗೆ ಪಕ್ಷದಲ್ಲಿ ಆದ್ಯತೆ ನೀಡದೆ ಮೂಲೆಗುಂಪು ಮಾಡಲಾಗುತ್ತದೆ ಎಂದು ದೂರಿದರು.

ಸಿಎಂ ಸಿದ್ಧರಾಮಯ್ಯ ಅವರು ರಾಹುಲ್ ಗಾಂಧಿಯವರ ಮನವೊಲಿಸಿ ಎರಡು ಕಡೆ ಸ್ಪರ್ಧಿಸಲು ಮುಂದಾಗಿದ್ದಾರೆ. ಅವರು ಎರಡಲ್ಲ ನಾಲ್ಕು ಕಡೆ ಸ್ಪರ್ಧಿಸಲಿ. ನನ್ನ ಗುರಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವುದಾಗಿದೆ ಎಂದರು.

Leave a Reply

Your email address will not be published. Required fields are marked *