ಬಿಜೆಪಿ ಮತ್ತು ಜೆಡಿಎಸ್ ರಾಜ್ಯ ಮತ್ತು ಜಿಲ್ಲಾ ಮುಖಂಡರು ಕಾಂಗ್ರೆಸ್ ಸೇರ್ಪಡೆ

ನ್ಯೂಸ್ ಕನ್ನಡ ವರದಿ-(11.04.18): ಕಾಪು: ಉಚ್ಚಿಲ ಎರ್ಮಾಳು ಪರಿಸರದ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ರಾಜ್ಯ ಹಾಗೂ ಜಿಲ್ಲಾ ಮುಖಂಡರು ಸಹಿತ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕಾಪು ರಾಜೀವ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ವಿನಯ್ ಕುಮಾರ್ ಸೊರಕೆ ಕಾಂಗ್ರೆಸ್ ಸೇರ್ಪಡೆ ಗೊಂಡ ಬಿಜೆಪಿ ಮತ್ತು ಜೆಡಿಎಸ್ ಮುಖಂಡರನ್ನು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.

ಬಿಜೆಪಿ ಮುಖಂಡರಾದ ದುಮಣಿ ಭಟ್ ಉಚ್ಚಿಲ, ನಾರಾಯಣ ಬೆಳ್ಚಡ ಉಚ್ಚಿಲ, ಹಾಗೂ ಜೆಡಿಎಸ್ ರಾಜ್ಯ ಮುಖಂಡರಾದ ಅಬ್ದುಲ್ ಅತೀಫ್ ದಾವೂದ್ ನೇತ್ರತ್ವದಲ್ಲಿ ಎ.ಕೆ ಶಾಬಾನ್ ಉಚ್ಛಿಲ, ಗುರುಪ್ರಸಾದ್ ಭಟ್ ಉಚ್ಛಿಲ, ಅಬ್ದುಲ್ ಹಮೀದ್ ಉಚ್ಚಿಲ, ಶೇಕುಞಿ ( ಚೆರಿಯಮೋನು) ಸಹಿತ ಅನೇಕ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು.

ಬಿಜೆಪಿ ಮತ್ತು ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಸೇರ್ಪಡೆ ಗೊಂಡ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ವಿನಯ್ ಕುಮಾರ್ ಸೊರಕೆ ಜಾತ್ಯಾತೀತ ನಿಲುವು ಹೊಂದಿದ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ದಿನದಲ್ಲಿ ಎಲ್ಲರಿಗೂ ಸೂಕ್ತ ಸ್ಥಾನಮಾನ ವನ್ನು ನೀಡುವ ಭರವಸೆ ನೀಡಿದರು.

ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಬೆಳಪು ದೇವಿ ಪ್ರಸಾದ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಜೆ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಕೋಟ್ಯಾನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಕಾಂಗ್ರೆಸ್ ಮುಖಂಡರಾದ ಇಮ್ರಾನ್ ಮಜೂರು,ದಲಿತ ಮುಖಂಡ ಲೋಕೇಶ್ ಅಂಚನ್,ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಝೋನಲ್ ಸಂಯೊಜಕ ರಫೀಕ್ ದೀವ್ ,ಜಿಲಾ ಸಂಯೊಜಕ ಸಿರಾಜ್ ಎನ್.ಎಚ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *