ಶಸ್ತ್ರ ಚಿಕಿತ್ಸೆಗೆ ಒಳಗಾದ ಸಂಸದ ಅನಂತಕುಮಾರ ಹೆಗಡೆ ರಾಜಕೀಯ ನಿವೃತ್ತಿ ಪಡೆಯಲಿದ್ದಾರೆಯೇ ?

ಕಾರವಾರ: ಕೇಂದ್ರದ ಮಾಜಿ ಸಚಿವ, ಸಂಸದ ಅನಂತಕುಮಾರ ಹೆಗಡೆ ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.

ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು(Back Pain) ಮತ್ತು ಕಾಲು ನೋವಿನಿಂದ ಬಳಲುತ್ತಿರುವ ಸಂಸದರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಕಾಲು ನೋವು ಹೆಚ್ಚಾದ ಕಾರಣ ತಕ್ಷಣವೇ ಕಾಲಿನ ಶಸ್ತ್ರ ಚಿಕಿತ್ಸೆಯನ್ನು ನಡೆಸುವ ಅವಶ್ಯಕತೆ ಇದೆ ಎಂದು ಹೇಳಿದ್ದರು.

ಇದೀಗ ಕೆಲವು ದಿನಗಳ ಹಿಂದೆ ನಡೆಸಿದ ಗಂಭೀರ ಶಸ್ತ್ರ ಚಿಕಿತ್ಸೆಯ ನಂತರ ಸಂಸದರು ಚೇತರಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ ಬಗ್ಗೆ ತಮ್ಮ ನಿರ್ಧಾರ ವ್ಯಕ್ತಪಡಿಸಿದ್ದರು. ಇದೀಗ ಅನಾರೋಗ್ಯದಿಂದ ಬಳಲುತ್ತಿರುವ ಅನಂತಕುಮಾರ ಹೆಗಡೆ(Ananth Kumar Hegde) ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.

Leave a Reply

Your email address will not be published. Required fields are marked *