ಐಪಿಎಲ್-2018: ಪಂಜಾಬ್ ತಂಡದ ವಿರುದ್ಧ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್ಸಿಬಿ!

ನ್ಯೂಸ್ ಕನ್ನಡ ವರದಿ-(13.04.18): ಈ ಸಲ ಕಪ್ ನಮ್ದೇ ಎಂಭ ಭರವಸೆಯಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡವು ಎರಡನೇ ಪಂದ್ಯಕ್ಕೆ ತಯಾರಾಗುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ಪ್ರಾರಂಭವಾಗಲಿದ್ದು, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಎದುರಿಸಲಿದೆ. ಈಗಾಗಲೇ ಬೆಂಗಳೂರು ತಂಡವು ಟಾಸ್ ಜಯಿಸಿದ್ದು, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಜಯದ ನಿರೀಕ್ಷೆಯಲ್ಲಿರುವ ರಾಯಲ್ ಚಾಲೆಂಜರ್ಸ್ ತಂಡವು ಯಶಸ್ವಿಯಾಗುತ್ತದೆಯೇ ಎಂದು ಕಾದು ನೋಡಬೇಕಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ನ ಈ ಮೊದಲ ಎಲ್ಲಾ ಆವೃತ್ತಿಯಲ್ಲೂ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಬೆಂಗಳೂರು ತಂಡದಲ್ಲಿದ್ದು, ಇದೀಗ ಪಂಜಾಬ್ ತಂಡವನ್ನು ಮೊದಲ ಬಾರಿಗೆ ಪ್ರತಿನಿಧಿಸಲಿದ್ದಾರೆ. ಗೇಲ್ ಮತ್ತು ರಾಯಲ್ ಚಾಲೆಂಜರ್ಸ್ ನಡುವಿನ ಈ ಪಂದ್ಯದ ಕುರಿತು ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆಯಿದೆ.

Leave a Reply

Your email address will not be published. Required fields are marked *