ಬೆಳಗಾವಿ ಉಪಚುನಾವಣೆ; ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿ ಎಲ್ಲರನ್ನು ನಿಬ್ಬೆರಗಾಗಿಸಿದ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ

ಬೆಳಗಾವಿ: ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದರು.

ನಗರದ ಆರ್.ಟಿ.ಒ ವೃತ್ತದಲ್ಲಿರುವ ಕಾಂಗ್ರೆಸ್ ಭವನದಿಂದ ಮೂರು ವಾಹನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಹಸಿರು ಶಾಲು ಧರಿಸಿದ್ದರು. ಎರಡು ಪ್ರತಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಡಾ. ಕೆ.ಹರೀಶಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಾರಕಿಹೊಳಿ ಅವರೊಂದಿಗೆ ಇದ್ದರು.

ಉಳಿದ ಮುಖಂಡರಾದ ಎಸ್.ಆರ್.ಪಾಟೀಲ, ಎಂ.ಬಿ.ಪಾಟೀಲ, ಆರ್.ವಿ. ದೇಶಪಾಂಡೆ, ಲಕ್ಷ್ಮಿ ಹೆಬ್ಬಾಳಕರ್, ನಿಸಾರ್ ಅಹ್ಮದ ಸೇರಿದಂತೆ ಅನೇಕ ಕಾಂಗ್ರೆಸ್ ಶಾಸಕರುಗಳು, ಮಾಜಿ ಸಚಿವರು ಡಿಸಿ ಕಚೇರಿ ಆವರಣದ ಹೊರಗಡೆ ಇದ್ದರು.

Leave a Reply

Your email address will not be published. Required fields are marked *