ಕಾಶಿ ವಿಶ್ವನಾಥ ದೇವಸ್ಥಾನ- ಜ್ಞಾನವಪಿ ಮಸೀದಿ ಸಂಕೀರ್ಣ ಸಮೀಕ್ಷೆಗೆ ಅನುಮತಿ ನೀಡಿದ ವಾರಣಾಸಿ ನ್ಯಾಯಾಲಯ
ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಪಿ ಮಸೀದಿ ಸಂಕೀರ್ಣ ಸಮೀಕ್ಷೆಗೆ ಗುರುವಾರ ವಾರಣಾಸಿ ನ್ಯಾಯಾಲಯ ಅನುಮತಿ ನೀಡಿದೆ. ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್ಐ) ಇಲಾಖೆ ಸರ್ವೆ ಕಾರ್ಯ ನಡೆಸುವಂತೆ ಕೋರ್ಟ್ ನಿರ್ದೇಶನ ನೀಡಿದೆ. ಸಮೀಕ್ಷೆಯ ವೆಚ್ಚವನ್ನು ಉತ್ತರ ಪ್ರದೇಶ ಸರ್ಕಾರ ಭರಿಸುವಂತೆ ನ್ಯಾಯಾಲಯ ತಿಳಿಸಿದೆ.
ಸ್ಥಳೀಯ ವಕೀಲ ವಿ.ಎಸ್.ರಾಸ್ತೋಗಿ ಅವರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ನ್ಯಾಯಾಲಯದ ಆದೇಶ ಬಂದಿದ್ದು, ಜ್ಞಾನವಪಿ ಮಸೀದಿಗೆ ಸೇರಿದ ಭೂಮಿಯನ್ನು ಹಿಂದೂಗಳಿಗೆ ನೀಡಬೇಕು ಎಂದು ಅರ್ಜಿಯಲ್ಲಿ ಒತ್ತಾಯಿಸಿದ್ದರು. 1664 ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬ್ 2000 ವರ್ಷಗಳಷ್ಟು ಹಳೆಯದಾದ ಕಾಶಿ ವಿಶ್ವನಾಥ ದೇವಾಲಯದ ಒಂದು ಭಾಗದಲ್ಲಿ ಮಸೀದಿ ನಿರ್ಮಿಸಲು ಬಳಸಿಕೊಂಡಿದ್ದಾನೆ ಎಂದು ಅರ್ಜಿದಾರರು ಹೇಳಿದ್ದಾರೆ. ಆದರೆ ಜ್ಞಾನವ್ಯಾಪಿ ಮಸೀದಿ ನಿರ್ವಹಣಾ ಸಮಿತಿ ಈ ಅರ್ಜಿಯನ್ನು ವಿರೋಧಿಸಿತ್ತು.
ಎಎಸ್ಐ ಜ್ಞಾನವಪಿ ಮಸೀದಿ ಹಾಗೂ ಕಾಶಿ ವಿಶ್ವನಾಥ ದೇವಾಲಯ ಸಮೀಕ್ಷೆ ಕಾರ್ಯ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ. ಮತ್ತು ಇದರ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.