ಉತ್ತರಪ್ರದೇಶ: ಅತ್ಯಾಚಾರ ಪ್ರಕರಣ ದಾಖಲಿಸಲು ಪೊಲೀಸರಿಂದ ನಿರಾಕರಣೆ; ದಲಿತ ಮಹಿಳೆ ಆತ್ಮಹತ್ಯೆ!

ನ್ಯೂಸ್ ಕನ್ನಡ ವರದಿ-(14.04.18): ಕಳೆದ ಕೆಲವು ದಿನಗಳಿಂದ ದೇಶದ ವಿವಿಧ ಭಾಗಗಳಲ್ಲಿ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ. ಉತ್ತರಪ್ರದೇಶದಲ್ಲಂತೂ ಅತ್ಯಾಚಾರ ಮತ್ತು ಕ್ರಿಮಿನಲ್ ಕೃತ್ಯಗಳು ಎಗ್ಗಿಲ್ಲದೇ ನಡೆಯುತ್ತಿವೆ. ಇದೀಗ ಉತ್ತರಪ್ರದೇಶದಲ್ಲಿ ಮತ್ತೊಂದು ಘಟನೆ ನಡೆದಿದ್ದು, ತನ್ನ ಮೇಲೆ ಅತ್ಯಾಚಾರ ನಡೆದಿದ್ದು, ಬಳಿಕ ಈ ಕುರಿತು ಪೊಲೀಸ್ ಕೇಸ್ ದಾಖಲಿಸಲು ತೆರಳಿದ ಸಂದರ್ಭದಲ್ಲಿ ಪೊಲಿಸರು ಪ್ರಕರಣ ದಾಖಲಿಸಲು ನಿರಾಖರಿಸಿದ್ದಾರೆ ಎಂದು ಪತ್ರ ಬರೆದಿಟ್ಟು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆಯು ಉತ್ತರಪ್ರದೇಶದ ಮುಝಾಫರ್ ನಗರ್ ನ ರಾಯಪುರ ಎಂಬ ಗ್ರಾಮದಲ್ಲಿ ನಡೆದಿದೆ.

ಉತ್ತರಪ್ರದೇಶದ ಮುಝಾಫರ್ ನಗರದ ಇಟ್ಟಿಗೆ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ದಲಿತ ಮಹಿಳೆಯೋರ್ವರ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರ ನಡೆಸಿದ್ದರು. ಈ ಕುರಿತು ಮಹಿಳೆಯು ತನ್ನ ಪತಿಯೊಂದಿಗೆ ಪೊಲೀಸ್ ಠಾಣೆಗೆ ದೂರು ದಾಖಲಿಸಲೆಂದು ತೆರಳಿದ್ದರು. ಆದರೆ ಫುಗಾನಾ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿರಲಿಲ್ಲ. ಈ ಕಾರಣದಿಂದಾಗಿ ಮಹಿಳೆಯು ವಿವರಗಳನ್ನು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕೂಡಲೇ ಫುಗಾನಾ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಸುಭಾಷ್ ಚಂದ್ ಎಂಬಾತನನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *