ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಬೃಹತ್ ಮೊತ್ತ ದಾಖಲಿಸಿದ ಮುಂಬೈ ಇಂಡಿಯನ್ಸ್!
ನ್ಯೂಸ್ ಕನ್ನಡ ವರದಿ-(14.04.18): ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಮತ್ತು ಗೌತಮ್ ಗಂಭೀರ್ ನೇತೃತ್ವದ ಡೆಲ್ಲಿ ಡೇರ್ ಡೆವಿಲ್ಸ್ ತಂಡಗಳ ನಡುವೆ 9ನೇ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವು ನಡೆಯುತ್ತಿದೆ. ಟಾಸ್ ಗೆದ್ದ ಡೆಲ್ಲಿ ಡೇರ್ ಡೆವಿಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 194 ರನ್ ಗಳ ಬೃಹತ್ ಮೊತ್ತ ದಾಖಲಿಸಿದೆ.
ಆರಮಭದಿಂದಲೂ ಮುಂಬೈ ಇಂಡಿಯನ್ಸ್ ತಂಡದ ಆಟಗಾರರು ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ತೋರಿದ್ದು, ಸೂರ್ಯಕುಮಾರ್ ಯಾದವ್(53) ಭರ್ಜರಿ ಅರ್ಧಶತಕ ದಾಖಲಿಸಿದರು. ಇವಿನ್ ಲೂಯಿಸ್ 28 ಎಸೆತಗಳಲ್ಲಿ 48 ರನ್ ಗಳಿಸಿದರು. ಬಳಿಕ ಆಗಮಿಸಿದ ಇಶನ್ ಕಿಶನ್ ಕೂಡಾ ಕೇವಲ 23 ಎಸೆತಗಳಲ್ಲಿ 44 ರನ್ ಗಳಿಸಿದರು. ನಂತರ ವಿಕೆಟ್ ಉದುರಲು ಪ್ರಾರಂಭವಾಗಿದ್ದು, 220ಕ್ಕೂ ಹೆಚ್ಚು ರನ್ ಗಳಿಸುವ ಸುವರ್ಣಾವಕಾಶವನ್ನು ಮುಂಬೈ ಇಂಡಿಯನ್ಸ್ ಕಳೆದುಕೊಂಡಿತು. ಕೊನೆಗೆ 7 ವಿಕೆಟ್ ನಷ್ಟಕ್ಕೆ 194 ರನ್ ಪೇರಿಸಿದ್ದು, ಡೆಲ್ಲಿ ತಂಡಕ್ಕೆ 195 ರನ್ ಗಳ ಗುರಿ ನೀಡಿದೆ.