ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಕುರಿತು ಸ್ಫೋಟಕ ಬ್ಯಾಟ್ಸ್ ಮನ್ ವಿಲಿಯರ್ಸ್ ಹೇಳಿದ್ದೇನು?

ನ್ಯೂಸ್ ಕನ್ನಡ ವರದಿ-(14.04.18): ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಪ್ರಾರಂಭಿಕ ಹಂತದಲ್ಲೇ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ತಂಡದ ಜೊತೆಗಿದ್ದಾರೆ. ಹಲವು ಪಂದ್ಯಗಳಲ್ಲಿ ಆಪತ್ಭಾಂದವರಾಗಿ ಬಂದು ರಾಯಲ್ ಚಾಲೆಂಜರ್ಸ್ ತಂಡವನ್ನು ರಕ್ಷಿಸಿದ ಕೀರ್ತಿಯೂ ಇವರಿಗೆ ಸಲ್ಲುತ್ತದೆ. ಇದೀಗ ನಾಯಕ ವಿರಾಟ್ ಕೊಹ್ಲಿ ಕುರಿತು ಮಾತನಾಡಿದ ವಿಲಿಯರ್ಸ್, ನಾನು ಮೈದಾನದಲ್ಲಿ ವಿರಾಟ್ ಕೊಹ್ಲಿ ಜೊತೆಗೂಡಿ ಆಡಲು ತುಂಬಾ ಉತ್ಸುಕನಾಗಿರುತ್ತೇನೆ ಎಂದು ಹೇಳಿದ್ದಾರೆ.

ಕ್ರೀಡಾ ಚಾನೆಲ್ ಸ್ಟಾರ್ ಸ್ಪೋಟ್ಸ್ ನಡೆಸಿದ ಸಂದರ್ಶನವೊಂದರಲ್ಲಿ ಮಾತನಾಡಿದ ಡಿವಿಲಿಯರ್ಸ್, ನಾನು ಮತ್ತು ವಿರಾಟ್ ಕೊಹ್ಲಿ ಬಹಳ ಕಾಲದಿಂದಲೂ ಉತ್ತಮ ಸ್ನೇಹಿತರಾಗಿದ್ದೇವೆ. ಮೈದಾನದಲ್ಲಿ ಆಡುವ ವೇಳೆ ಪ್ರತಿ ಹಂತದಲ್ಲೂ ಆಟದ ಬಗ್ಗೆ ಮಾತನಾಡುತ್ತಿರುತ್ತೇವೆ. ಪರಸ್ಪರ ಆಲೋಚನೆಗಳನ್ನು ಸರಳವಾಗಿ ಹಂಚಿಕೊಳ್ಳುತ್ತೇವೆ. ಈ ಕಾರಣದಿಂದಲೇ ಬಹುಕಾಲದಿಂದಲೂ ಆರ್‌ಸಿಬಿ ತಂಡದಲ್ಲಿ ನಾವಿಬ್ಬರು ಉತ್ತಮ ಜೊತೆಗಾರರಾಗಿದ್ದೇವೆ ಎಂದಿದ್ದಾರೆ.

Leave a Reply

Your email address will not be published. Required fields are marked *