ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಪೋಟ: ಕೆಪಿಸಿಸಿ ಉಪಾಧ್ಯಕ್ಷ ವಿ.ಅರ್.ಸುದರ್ಶನ್ ರಾಜೀನಾಮೆ!
ನ್ಯೂಸ್ ಕನ್ನಡ ವರದಿ(15-04-2028): ಟಿಕೆಟ್ ಘೋಷಣೆಗೂ ಮುನ್ನವೇ ಕಾಂಗ್ರೆಸ್ ಪಕ್ಷದಳಗಿನ ಭಿನ್ನಮತ ಸ್ಪೋಟಗೊಂಡಿದ್ದು, ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ವಿ.ಆರ್.ಸುದರ್ಶನ್ ರಾಜೀನಾಮೆ ನೀಡಿದ್ದಾರೆ.
ಇಂದು ಸಂಜೆಯ ವೇಳೆಗೆ 223 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಒಂದೇ ಬಾರಿ ಬಿಡುಗಡೆಯಾಗಲಿದ್ದು, ಅಭ್ಯರ್ಥಿಗಳ ಮಾನದಂಡವನ್ನು ಅಳೆದುತೂಗಿ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗಿದೆಯೆಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಕೋಲಾರ ವಿಧಾನಸಭಾ ಕ್ಷೇತ್ರದಿಂದ ಟಿಕೇಟ್ ಆಕಾಂಕ್ಷಿಯಾಗಿದ್ದ ವಿ.ಆರ್ ಸುದರ್ಶನ್ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಗಡಿಯಿಂದ ಬಂದಿರುವ ಜಮೀರ್ ಪಾಷಾಗೆ ಟಿಕೆಟ್ ನೀಡಿರುವುದರಿಂದ ಅಸಮಾಧಾನಗೊಂಡಿರುವ ಸುದರ್ಶನ್ ಪರಮೇಶ್ವರ್ಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಈಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮುನ್ನ ಭಿನ್ನಮತ ಸ್ಪೋಟಗೊಂಡಿದ್ದು ಕಾಂಗ್ರೆಸಿಗೆ ತಲೆನೋವಾಗಿ ಪರಿಣಮಿಸಿದೆ.