ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ: ಅಸಾದುದ್ದೀನ್ ಓವೈಸಿ

ನ್ಯೂಸ್ ಕನ್ನಡ ವರದಿ(15-04-2018): ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನನ್ನ ನೇತೃತ್ವದ ಎಐಎಂಐಎಂ ಪಕ್ಷ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

ಕರ್ನಾಟಕದಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದರಿಂದ ಜಾತ್ಯಾತೀತ ಮತಗಳು ವಿಭಜನೆಯಾಗುತ್ತದೆ. ಇದು ನನಗೆ ಇಷ್ಟವಿಲ್ಲ. ಕೋಮುವಾದಿಗಳನ್ನು ಅಧಿಕಾರದಿಂದ ದೂರ ಇಡುವುದಕ್ಕಾಗಿ ಜಾತ್ಯಾತೀತ ಮತಗಳ ವಿಭಜನೆಯನ್ನು ತಡೆಯುವುದು ಬಹಳ ಮುಖ್ಯವಾಗಿದೆ. ಈ ಕಾರಣದಿಂ ನಮ್ಮ ಪಕ್ಷ ಸ್ಪರ್ಧಿಸಲಾರದು ಎಂದು ಓವೈಸಿ ಹೇಳಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅಸಾದುದ್ದೀನ್ ಓವೈಸಿಯ ಮನವೊಳಿಸಲು ಈ ಹಿಂದೆ ಕಾಂಗ್ರೆಸ್ ಪಕ್ಷವು ಶಾಸಕ ಜಮೀರ್ ಅಹ್ಮದ್ ಅವರನ್ನು ಓವೈಸಿ ಜೊತೆ ಮಾತುಕತೆ ನಡೆಸಲು ಕಳುಹಿಸಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

Leave a Reply

Your email address will not be published. Required fields are marked *